ಅಫಜಲಪುರದಲ್ಲಿ ಮಾಲಿಕಯ್ಯ ಗುತ್ತೇದಾರ್‌ಗೆ ಬಿಜೆಪಿ ಟಿಕೆಟ್: ತಮ್ಮನಿಂದಲೇ ವಿರೋಧ- ಕಾಂಗ್ರೆಸ್‌ಗೆ ಲಾಭ?
ಅಫಜಲಪುರ, ಏಪ್ರಿಲ್ 12: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಬಿಜೆಪಿ ( BJP ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಬಿಜೆಪಿಯೊಳಗೆ ಬಂಡಾಯವನ್ನು ಹುಟ್ಟುಹಾಕಿದೆ. ಪ್ರಬಲ ನಾಯಕರಿಗೂ ಟಿಕೆಟ್ ತಪ್ಪಿರುವುದರಿಂದ ಕೇಸರಿ ಪಾಳಯಲದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ.
ಶಿವಮೊಗ್ಗ, ಬೆಳಗಾವಿ, ಕಲಬುರಗಿಯಲ್ಲಿ ಬಂಡಾಯ ಕಂಡುಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಮಾಲಿಕಯ್ಯ ಗೊತ್ತೇದಾರ ಅವರಿಗೆ ಟಿಕೆಟ್ ನೀಡಿರುವ ವಿಚಾರ ಕಲಬುರಗಿ ಜಿಲ್ಲೆಯ ಬಿಜೆಪಿಯಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅವರ ಕಿರಿಯ ಸಹೋದರ ನಿತೀನ್ ಗುತ್ತೇದಾರ್ ಅವರು ವಿರೋಧ ವ್ಯಕ್ತಪಡಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ನಿತಿನ್ ಗುತ್ತೇದಾರ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಈಗ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಸಹಜವಾಗಿಯೇ ಬಂಡಾಯ ಏಳುವ ಸಾಧ್ಯತೆ ಇದೆ.
ಅಫಜಲಪುರ ಕ್ಷೇತ್ರದ ಬಿಜೆಪಿ ನಾಯಕರಲ್ಲಿ ಎರಡು ಗುಂಪುಗಳಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ಗುಂಪು ಮಾಲಿಕಯ್ಯ ಗುತ್ತೇದಾರ್ ಅವರನ್ನು ಬೆಂಬಲಿಸುತ್ತಿದೆ. ಇನ್ನೊಂದು ನಿತಿನ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ. ಈಗ ಟಿಕೆಟ್ ಕೈತಪ್ಪಿರುವ ನಿತಿನ್ ಗುತ್ತೇದಾರ್ ಅವರು ಸ್ವತಂತ್ರರಾಗಿ ಸ್ಪರ್ಧಿಸಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿದೆ.

ಆರು ಬಾರಿ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಮನೆಯ ಮೇಲೆ ಕಾಂಗ್ರೆಸ್ ಬಾವುಟವನ್ನು ಹಾರಿಸಿಕೊಂಡಿದ್ದರು. ಆದರೆ, 2018 ರಲ್ಲಿ ಅಂದರೆ ಕಳೆದ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಬಿಜೆಪಿಗೆ ಸೇರಲು ಕಾಂಗ್ರೆಸ್ ಪಕ್ಷವನ್ನು ತೊರೆದರು. ಆ ಸಂದರ್ಭದಲ್ಲಿ ಮಾಲಿಕಯ್ಯ ಗುತ್ತೇದಾರ್ ಅವರ ಜೊತೆ ನಿತಿನ್ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.
ಈಗ ಸಹೋದರರ ನಡುವಿನ ಆಂತರಿಕ ಕಚ್ಚಾಟದಿಂದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗೊಂದಲ ಹಾಗೂ ನಿರಾಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಪಕ್ಷದ ಆಂತರಿಕ ಕಚ್ಚಾಟ ಕಾಂಗ್ರೆಸ್‌ಗೆ ಲಾಭ ಮಾಡಿಕೊಡಬಹುದು ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಎಂ ವೈ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಈ ಕ್ಷೇತ್ರ ಹಾಲಿ ಶಾಸಕರಾಗಿದ್ದು, ಬಿಜೆಪಿ ಬಂಡಾಯದಿಂದ ಲಾಭ ಪಡೆಯಬಹುದು ಎಂದು ರಾಜಕೀಯ ಪಂಡಿತರ ಅಭಿಪ್ರಾಯ ಪಟ್ಟಿದ್ದಾರೆ.
ಈ ಕ್ಷೇತ್ರದಲ್ಲಿ ಕೋಲಿ ಸಮಾಜದ ಮತದಾರರು ಶೇ 14 ರಷ್ಟಿದ್ದಾರೆ. ಕುರುಬ ಮತದಾರರು ಶೇ 12 ರಷ್ಟಿದ್ದಾರೆ. ಪಂಚಮಸಾಲಿ ಲಿಂಗಾಯತ ಮತದಾರರು ಶೇ 12 ರಷ್ಟಿದ್ದಾರೆ. ಎಸ್‌ಸಿ ಮತದಾರರ ಸಂಖ್ಯೆ ಸರಿ ಸುಮಾರು 44,068 ಆಗಿದೆ. ಮುಸ್ಲಿಂ ಮತದಾರರು ಸರಿಸುಮಾರು 36,296 ರಷ್ಟಿದ್ದಾರೆ. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್‌ಪುರ ವಿಧಾನಸಭೆಯ ಒಟ್ಟು ಮತದಾರರು ಸಂಖ್ಯೆ 2, 22, 677 ರಷ್ಟಿತ್ತು. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್‌ಪುರ ವಿಧಾನಸಭೆಯ ಮತಗಟ್ಟೆಗಳ ಸಂಖ್ಯೆ 251 ರಷ್ಟಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications