ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ? ಖರ್ಗೆ ಪ್ರತಿಕ್ರಿಯೆ ಏನು?
Recommended Video

ಕಲಬುರಗಿ, ಏಪ್ರಿಲ್ 25: "ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ" ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ನಿನ್ನೆ(ಏ.24) ಪತ್ರಕರ್ತರ ಜೊತೆ ಮಾತನಾಡಿದ ಅವರು ಈ ರೀತಿ ಹೇಳಿದರು.
'ಹೈಕಮಾಂಡ್ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುತ್ತದೆ ಎಂಬ ನಂಬಿಕೆ ಇದೆ' ಎಂದು ಸಹ ಅವರು ಹೇಳಿದ್ದಾರೆ.
"ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಲ್ಲಾ ಸಿದ್ಧತೆಗಳೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಸ್ತುವಾರಿಯಲ್ಲೇ ನಡೆಯುತ್ತಿದೆ. ಅವರು ಈಗಿನ ಮುಖ್ಯಮಂತ್ರಿಯೂ ಹೌದು. ಅಂದ ಮೇಲೆ ಹೈಕಮಾಂಡ್ ಬೇರೆ ಅಭ್ಯರ್ಥಿಯನ್ನು ಆರಿಸುವ ಪ್ರಶ್ನೆಯೇ ಇಲ್ಲ. ಅವರು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಆರಿಸುತ್ತದೆ ಎಂಬ ಭರವಸೆ ನನಗಿದೆ" ಎಂದು ಅವರು ಹೇಳಿದ್ದಾರೆ.

"ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆರಿಸಿಲ್ಲ" ಎಂದು ಖರ್ಗೆ ಅವರು ಹೇಳಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಇವೆಲ್ಲ ಸುಳ್ಳು ಸುದ್ದಿಯಷ್ಟೇ, ಇವೆಲ್ಲ ಪಕ್ಷದಲ್ಲಿ ಬಿರುಕು ತರುವ ಯತ್ನ ಎಂದಿದ್ದಾರೆ.












Click it and Unblock the Notifications