ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ? ಖರ್ಗೆ ಪ್ರತಿಕ್ರಿಯೆ ಏನು?

|
Google Oneindia Kannada News

Recommended Video

ಸಿದ್ದರಾಮಯ್ಯ, ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ | ಮಲ್ಲಿಕಾರ್ಜುನ್ ಖರ್ಗೆ ಹೇಳೋದ್ ಹೀಗೆ | Oneindia Kannada

ಕಲಬುರಗಿ, ಏಪ್ರಿಲ್ 25: "ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ" ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ನಿನ್ನೆ(ಏ.24) ಪತ್ರಕರ್ತರ ಜೊತೆ ಮಾತನಾಡಿದ ಅವರು ಈ ರೀತಿ ಹೇಳಿದರು.

'ಹೈಕಮಾಂಡ್ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುತ್ತದೆ ಎಂಬ ನಂಬಿಕೆ ಇದೆ' ಎಂದು ಸಹ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಮೇಲಿನ ಮುನಿಸಿನ ಬಗ್ಗೆ ಖರ್ಗೆ ಹೇಳಿದ್ದು ಹೀಗೆ...ಸಿದ್ದರಾಮಯ್ಯ ಮೇಲಿನ ಮುನಿಸಿನ ಬಗ್ಗೆ ಖರ್ಗೆ ಹೇಳಿದ್ದು ಹೀಗೆ...

"ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಲ್ಲಾ ಸಿದ್ಧತೆಗಳೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಸ್ತುವಾರಿಯಲ್ಲೇ ನಡೆಯುತ್ತಿದೆ. ಅವರು ಈಗಿನ ಮುಖ್ಯಮಂತ್ರಿಯೂ ಹೌದು. ಅಂದ ಮೇಲೆ ಹೈಕಮಾಂಡ್ ಬೇರೆ ಅಭ್ಯರ್ಥಿಯನ್ನು ಆರಿಸುವ ಪ್ರಶ್ನೆಯೇ ಇಲ್ಲ. ಅವರು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಆರಿಸುತ್ತದೆ ಎಂಬ ಭರವಸೆ ನನಗಿದೆ" ಎಂದು ಅವರು ಹೇಳಿದ್ದಾರೆ.

Karnataka Elections: Siddaramaiah for CM? Here is Kharges replay

"ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆರಿಸಿಲ್ಲ" ಎಂದು ಖರ್ಗೆ ಅವರು ಹೇಳಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಇವೆಲ್ಲ ಸುಳ್ಳು ಸುದ್ದಿಯಷ್ಟೇ, ಇವೆಲ್ಲ ಪಕ್ಷದಲ್ಲಿ ಬಿರುಕು ತರುವ ಯತ್ನ ಎಂದಿದ್ದಾರೆ.

ಸಿದ್ದರಾಮಯ್ಯರ ಫೋಟೋ ತೆಗೆದ ಖರ್ಗೆ, ಚಿತ್ರ ಏನು ಹೇಳುತ್ತದೆ?ಸಿದ್ದರಾಮಯ್ಯರ ಫೋಟೋ ತೆಗೆದ ಖರ್ಗೆ, ಚಿತ್ರ ಏನು ಹೇಳುತ್ತದೆ?

English summary
Senior Congress Party leader Mallikarjun Kharge on Tuesday stated that the party high command would decide the chief ministerial candidate in poll-bound Karnataka.He was hopeful of incumbent Chief Minister Siddaramaiah being chosen as the party's candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X