ಸಿದ್ದರಾಮಯ್ಯ ಸರ್ಕಾರ, ಭ್ರಷ್ಟಾಚಾರ ಎರಡೂ ಒಂದೇ : ಅಮಿತ್ ಶಾ

ಕಲಬುರಗಿ, ಫೆಬ್ರವರಿ 26 : 'ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಗದೆಟ್ಟಿಗೆ. ಭ್ರಷ್ಟಾಚಾರ ಹೆಚ್ಚಾಗಿದೆ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಪ್ರವಾದಲ್ಲಿದ್ದಾರೆ. ಸೋಮವಾರ ಅವರು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಠಿಗೂ ಮೊದಲು ಅಮಿತ್ ಶಾ ಅವರು ಪತ್ನಿ ಜೊತೆ ಸೇಡಂ ತಾಲೂಕಿನ ಮಳಖೇಡದಲ್ಲಿರುವ ಉತ್ತರಾಧಿಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

 Amit Shah

ಪತ್ರಿಕಾಗೋಷ್ಠಿ ಮುಖ್ಯಾಂಶಗಳು

Feb 26, 2018, 12:26 pm IST

'ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಹಿರಿಯ ನಾಯಕರು. ಟಿಕೆಟ್ ಕೊಡುವ ವಿಚಾರವನ್ನು ನಮಗೆ ಬಿಡಿ' ಎಂದು ಅಮಿತ್ ಶಾ ಉತ್ತರ ನೀಡಿದರು.
Feb 26, 2018, 12:26 pm IST

ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಕೊಡುವ ಬಗ್ಗೆ ಪ್ರಶ್ನಿಸಲಾಯಿತು.
Feb 26, 2018, 12:23 pm IST

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯುವ ಹಂತಕ್ಕೆ ಬರಲಿದೆ.
Feb 26, 2018, 12:21 pm IST

ಕಾಂಗ್ರೆಸ್ ಪಕ್ಷಕ್ಕೆ ಸೋಲಿಯ ಭಯ ಆರಂಭವಾಗಿದೆ.
Feb 26, 2018, 12:19 pm IST

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಾರೆ. ರಾಜ್ಯದ ರೈತರ ಹಿತ ಕಾಪಾಡುವುದು ರಾಜ್ಯ ಸರ್ಕಾರದ ಹೊಣೆಯಲ್ಲವೇ? ಎಂದು ಪ್ರಶ್ನಿಸಿದರು.
Feb 26, 2018, 12:19 pm IST

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ
Feb 26, 2018, 12:15 pm IST

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರ ಪಿಎಫ್‌ಐ, ಎಸ್‌ಡಿಪಿಐ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದು ಮತ ಬ್ಯಾಂಕ್ ರಾಜಕಾರಣವನ್ನು ಮಾಡುತ್ತಿದೆ.
Feb 26, 2018, 12:13 pm IST

ಕರ್ನಾಟಕ ಸರ್ಕಾರ ಎಲ್ಲಾ ರಂಗದಲ್ಲಿ ಆಡಳಿತ ನಡೆಸಲು ವಿಫಲವಾಗಿದೆ. ಭ್ರಷ್ಟಾಚಾರ ಮತ್ತು ಸಿದ್ದರಾಮಯ್ಯ ಸರ್ಕಾರ ಎರಡೂ ಒಂದೇ ಆಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+