ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

85ನೇ ಕನ್ನಡ ಸಾಹಿತ್ಯ ಸಮ್ಮೇಳನ; 10 ಕೋಟಿ ಅನುದಾನ ಬಿಡುಗಡೆ

|
Google Oneindia Kannada News

ಕಲಬುರಗಿ, ಫೆಬ್ರವರಿ 04 : ಕಲಬುರಗಿಯಲ್ಲಿ ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಫೆಬ್ರವರಿ 5ರಂದು ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ.

ಕಲಬುರಗಿ ಜಿಲ್ಲಾಧಿಕಾರಿ ಮತ್ತು ಸಮ್ಮೇಳನದ ಕೋಶಾಧ್ಯಕ್ಷರಾದ ಶರತ್ ಬಿ. ಈ ಕುರಿತು ಮಾಹಿತಿ ನೀಡಿದರು. "ಎರಡು ದಿನದಲ್ಲಿ ಸಮ್ಮೇಳನದ ಖಾತೆಗೆ ಹಣ ಜಮಾ ಆಗಲಿದೆ. ಜನರಿಂದಲೂ ದೇಣಿಗೆ ಹರಿದುಬರುತ್ತಿದೆ" ಎಂದರು.

ರಂಗೋಲಿಯಲ್ಲಿ ಅರಳಿದ ಕನ್ನಡದ ಸಂಸ್ಕೃತಿ, ಇತಿಹಾಸರಂಗೋಲಿಯಲ್ಲಿ ಅರಳಿದ ಕನ್ನಡದ ಸಂಸ್ಕೃತಿ, ಇತಿಹಾಸ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಮ್ಮೇಳನಕ್ಕೆ 14 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿತ್ತು. ಆದರೆ, ಸರ್ಕಾರ 10 ಕೋಟಿ ರೂ. ನೀಡಿದೆ. ಕಳೆದ ಬಾರಿ ಧಾರವಾಡದಲ್ಲಿ ಸಾಹಿತ್ಯ ಸಮ್ಮೇಳನ ನಡೆದಾಗಲೂ 10 ಕೋಟಿ ರೂ. ಅನುದಾನವನ್ನು ನೀಡಲಾಗಿತ್ತು.

ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಬಸ್ ವ್ಯವಸ್ಥೆ, 5 ರೂ. ದರಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಬಸ್ ವ್ಯವಸ್ಥೆ, 5 ರೂ. ದರ

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಸಮ್ಮೇಳನಾಧ್ಯಕ್ಷರಾದ ಡಾ. ಎಚ್. ಎಸ್ ವೆಂಕಟೇಶಮೂರ್ತಿ ಬೆಂಗಳೂರಿನಿಂದ ಮಂಗಳವಾರ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದರು.

ಈ ಶಾಲೆಯಲ್ಲಿ ಮಕ್ಕಳು ಕನ್ನಡ ಮಾತಾಡಿದರೆ ದಂಡಈ ಶಾಲೆಯಲ್ಲಿ ಮಕ್ಕಳು ಕನ್ನಡ ಮಾತಾಡಿದರೆ ದಂಡ

ಸಾಹಿತ್ಯ ಸಮ್ಮೇಳನಕ್ಕೆ ತಯಾರಿ

ಸಾಹಿತ್ಯ ಸಮ್ಮೇಳನಕ್ಕೆ ತಯಾರಿ

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. "ಕನ್ನಡಿಗರೆಲ್ಲರೂ ಬಿಚ್ಚು ಮನಸ್ಸಿನಿಂದ ಪಾಲ್ಗೊಂಡು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಂತೆ" ಜಿಲ್ಲಾಧಿಕಾರಿ ಶರತ್ ಬಿ. ಅವರು ಕರೆ ನೀಡಿದ್ದಾರೆ.

ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ

ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ

ಕಲಬುರಗಿಗೆ ಮಂಗಳವಾರ ಆಗಮಿಸಿದ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು. ಫೆಬ್ರವರಿ 5ರ ಬುಧವಾರ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

3 ಕೋಟಿ ರೂ. ದೇಣಿಗೆ

3 ಕೋಟಿ ರೂ. ದೇಣಿಗೆ

ಕಲಬುರಗಿಯ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರಿಂದ ಒಂದು ದಿನದ ವೇತನ ರೂಪವಾಗಿ 3 ಕೋಟಿ ರೂ.ಗಳ ದೇಣಿಗೆಯ ಚೆಕ್‌ ಅನ್ನು ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ನೀಡಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ

ಶಾಲಾ-ಕಾಲೇಜುಗಳಿಗೆ ರಜೆ

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಫೆಬ್ರವರಿ 5 ರಿಂದ 7ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಲಾಗಿದೆ.

English summary
Karnataka government released 10 crore for the 85th Kannada Sahitya Sammelana. Sahitya sammelana will be held on February 5, 6 and 7 at Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X