ಬಿಜೆಪಿ ಆಡಿಯೋ ಟೇಪ್ ಪ್ರಕರಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಕಲಬುರಗಿ, ಫೆಬ್ರವರಿ 21: ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಅವರ ಪುತ್ರ ಶರಣಗೌಡ ಪಾಟೀಲ್ ಸಲ್ಲಿಸಿದ್ದ ಎಫ್‌ಐಆರ್‌ನ್ನು ರದ್ದುಪಡಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಶರಣಗೌಡ ಪಾಟೀಲ್ ರಾಯಚೂರು ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಾಗಿತ್ತು.

ಬಿಎಸ್‌ ಯಡಿಯೂರಪ್ಪ ಅವರು ಶರಣಗೌಡ ಅವರನ್ನು ಬಿಜೆಪಿಗೆ ಸೆಳೆಯಲು ಆಮಿಷೊಡ್ಡಿದ್ದರು ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

Karnataka High Court reserves verdict in BSY tape case

ಯಡಿಯೂರಪ್ಪ ಅವರ ಪರವಾಗಿ ಸಿ ವಿ ನಾಗೇಶ್, ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನಾಯಕ್ ಮತ್ತು ಮರಮ್ಕಲ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.ಪ್ರಾಸಿಕ್ಯೂಟರ್ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂಜಯ್ ಚೌಟ ವಾದಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಕಾಯ್ದಿರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+