ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರಪಯೋಗವಾಗಬಾರದು: ಸಚಿವ ಕೃಷ್ಣ ಬೈರೇಗೌಡ
ಕಲಬುರಗಿ, ಜುಲೈ 31: "ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಅವರನ್ನು ಬದುಕಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಳಿತ ವರ್ಗ ಹೆಚ್ಚಿನ ಗಮನ ನೀಡಬೇಕಿದೆ" ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರೊಂದಿಗೆ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, "ಕಂದಾಯ ಇಲಾಖೆಯು ಸರ್ಕಾರದ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹ ಮಾತೃ ಹೃದಯಿಗಳಾಗಿರಬೇಕು. ಸರ್ಕಾರದ ಉದ್ದೇಶ ಮತ್ತು ಧ್ಯೆಯೋದ್ದೇಶಗಳನ್ನು ಅರಿತು ಜನರಿಗೆ ಉತ್ತಮ ಆಡಳಿತ ನೀಡಬೇಕು" ಎಂದು ಕೃಷ್ಣ ಬೈರೇಗೌಡ ವಿಭಾಗದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

"ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ಆಡಳಿತದಲ್ಲಿ ಬದಲಾವಣೆ ತರಬೇಕು. ಸರಳೀಕರಣಕ್ಕೆ ಆದ್ಯತೆ ಕೊಡಿ. ಕಂದಾಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿ ತಂಡದ ರೂಪದಲ್ಲಿ ಕಾರ್ಯನಿರ್ವಹಿಸಬೇಕು. ಕಂದಾಯ ಸಚಿವನಾದ ಮೇಲೆ ಈಗಾಗಲೆ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ್ದು, ಇಂದು ಇಲ್ಲಿ ನಡೆಸಲಾಗುತ್ತಿದೆ. ಮುಂದೆ ಜಿಲ್ಲಾವಾರು ಸಹ ಪ್ರಗತಿ ಪರಿಶೀಲನೆ ಮಾಡಲಾಗುತ್ತದೆ" ಎಂದು ತಿಳಿಸಿದ್ದಾರೆ.
ಜನರನ್ನು ಬದುಕಿಸುವುದು ನಮ್ಮ ಆದ್ಯತೆ
ಕಳೆದ ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ವಿಭಾಗದಲ್ಲಿ ನೆರೆ ಹಾವಳಿಯಿಂದ ಮಾನವ ಮತ್ತು ಜಾನುವಾರುಗಳ ಜೀವ ಹಾನಿ, ಕೃಷಿ ಬಿತ್ತನೆ ಕುರಿತು ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಅವರನ್ನು ಬದುಕಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಳಿತ ವರ್ಗ ಹೆಚ್ಚಿನ ಗಮನ ನೀಡಬೇಕಿದೆ ಎಂದಿದ್ದಾರೆ.

ಕಷ್ಟದಲ್ಲಿದ್ದವರಿಗೆ ಪರಿಹಾರ ವಿತರಣೆ ಮಾಡುವುದು ಒಳ್ಳೆಯದ್ದೆ. ನೊಂದವರಿಗೆ ಸರ್ಕಾರ ಸಹಾಯ ಹಸ್ತ ಚಾಚುವುದು ಉತ್ತಮ. ಆದರೆ ಇದನ್ನು ದುರಪಯೋಗ ವಾಗಬಾರದು ಎಂಬುದು ನಮ್ಮ ಕಳಕಳಿ. ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರಪಯೋಗವಾದಲ್ಲಿ ಅದು ಕೆಟ್ಟ ಆಡಳಿತಕ್ಕೆ ಅವಕಾಶ ಮಾಡಿಕೊಡುತ್ತದೆ. ಪರಿಹಾರ ವಿತರಣೆಯ ಕೆಲವೊಂದು ಪ್ರಕರಣದಲ್ಲಿ ಸ್ಯಾಟಲೈಟ್ ಫೋಟೋ ಗಳನ್ನು ಪರೀಕ್ಷಿಸಿ ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಭೂಮಿ ತಂತ್ರಾಂಶದಲ್ಲಿ ಪಹಣಿ ಪತ್ರಿಕೆ ತಿದ್ದುಪಡಿ, ವರ್ಗಾವಣೆ ವಿಷಯ ಕುರಿತು ಚರ್ಚೆಯಲ್ಲಿ ಕಲಬುರಗಿ ವಿಭಾಗದಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ 5,266 ಪ್ರಕರಣಗಳು ಬಾಕಿ ಇರುವುದನ್ನು ಗಮನಿಸಿದ, ಇಂತಹ ಪ್ರಕರಣಗಳಿಂದಲೆ ಜನರು ಬೇಸತ್ತು ನನ್ನನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಬರುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಮುಟೇಷನ್ ಡಿಸ್ಪೂಟ್ ಪ್ರಕರಣಗಳನ್ನು 4-5 ವಿಚಾರಣೆಗಳಲ್ಲಿ ಮುಗಿಸಿ ಜನರಿಗೆ ನೆಮ್ಮದಿ ಕಲ್ಪಿಸಿ ಎಂದು ತಹಶೀಲ್ದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಮಾತನಾಡಿ, 3 ತಿಂಗಳ ಒಳಗೆ ಇಂತಹ ಪ್ರಕರಣಗಳು ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳು ಮಾಸಿಕ ಪ್ರಗತಿ ಪರಿಶೀಲನೆ ಮಾಡಬೇಕು. ಡಿ.ಸಿ.ಗಳಿಗೆ ಕಂದಾಯ ಇಲಾಖೆ ಹೊರತಾಗಿ ಇತರೆ ಇಲಾಖೆಯ ಕೆಲಸಗಳು ಇವೆ. ಆದರೆ ಮಾತೃ ಇಲಾಖೆಯ ಮೂಲ ಕೆಲಸ ಮಾತ್ರ ಮರೆಯಬಾರದು ಎಂದಿದ್ದಾರೆ.
ಸಿಡಿಲು, ಮಿಂಚು ಕುರಿತು ಅರಿವು ಮೂಡಿಸಬೇಕು
ಕಲಬುರಗಿ ವಿಭಾಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ 3 ತಿಂಗಳಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಈ ವರ್ಷ ಸಿಡಿಲು, ಮಿಂಚಿನಿಂದ 80 ಜನ ಸಾವನಪ್ಪಿದ್ದಾರೆ. ಸಿಡಿಲು ಕುರಿತು ಹೆಚ್ಚಿನ ಅರಿವು ನೀಡಿದಲ್ಲಿ ಈ ಸಾವು ತಪ್ಪಿಸಬಹುದಿತ್ತು. ಜಿಲ್ಲಾಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ಮಳೆಗಾಲ ಸಂದರ್ಭದಲ್ಲಿ ಸಿಡಿಲಿನಿಂದ ಸಾವನಪ್ಪುವರ ಸಂಖ್ಯೆ ಇತ್ತೀಚಿನ ವರ್ಷದಲ್ಲಿ ಹೆಚ್ಚುತ್ತಿದೆ. ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣ. ಇದನ್ನು ನಿಯಂತ್ರಿಸಬೇಕಿದೆ. ನೊಂದ ಕುಟುಂಬಗಳಿಗೆ ಸರ್ಕಾರ 24 ಗಂಟೆಯಲ್ಲಿ ಪರಿಹಾರ ನೀಡಬಹುದು, ಆದರೆ ಹೋದ ಜೀವ ಮತ್ತೆ ಮರುಕಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆ ಕೆಲಸ ವಿಳಂಬವಾಗಬಾರದು
ಇದೇ ವೇಳೆ ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2020-21ನೇ ಸಾಲಿನ ನೆರೆ ಹಾವಳಿಯ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿರುವುದಕ್ಕೆ ಅಸಮಾಧಾನ ಸೂಚಿಸಿದ್ದಾರೆ. ರಸ್ತೆ, ಶಾಲೆ, ಸೇತುವೆ ದುರಸ್ತಿಗೆ ನಿರ್ವಹಣೆಯಲ್ಲಿ 1-2 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಮಳೆಗಾಲ ಹೋಗಿ ಮತ್ತೆ ಮಳೆಗಾಲ ಬಂದರೂ ಕೆಲಸ ಇನ್ನು ಮುಗಿಯಲ್ಲ ಎಂದರೆ ಏನರ್ಥ. ನೀಡಲಾದ ಅನುದಾನ ಉದ್ದೇಶ ಈಡೇರುತ್ತಾ ಎಂದು ಜಿಲ್ಲಾಧಿಕಾರಿಗಳ ಮೇಲೆ ಕಿಡಿ ಕಾರಿದ್ದಾರೆ.
ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ 2020-21ರಲ್ಲಿ 640 ಕೆಲಸ ಕೈಗೆತ್ತಿಕೊಂಡಿದ್ದು, ಇದರಲ್ಲಿ 514 ಮುಕ್ತಾಯವಾಗಿದ್ದು, 132 ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಂದಿನ 15 ದಿನದಲ್ಲಿ ಮುಗಿಸುವುದಾಗಿ ಸಚಿವರಿಗೆ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಹಳೇ ವರ್ಷದ ವಿಪತ್ತು ನಿರ್ವಹಣೆ ಕೆಲಸಗಳನ್ನು ಮತ್ತು ಕೊಪ್ಪಳ, ಯಾದಗಿರಿಯಲ್ಲಿ ಕೋವಿಡ್ ನಿರ್ವಹಣೆಯ ಬಾಕಿ ಅನುದಾನ ಮುಂದಿನ 10 ದಿನದಲ್ಲಿ ಖರ್ಚು ಮಾಡಿ ಇಲ್ಲ ಸರ್ಕಾರಕ್ಕೆ ಅನುದಾನ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್ ಮಾತನಾಡಿ, ಮುಂಗಾರು ಪೂರ್ವ ವಿಪತ್ತು ನಿರ್ವಹಣೆಯ ಎಲ್ಲಾ ಪಾವತಿಗಳನ್ನು ಮುಂದಿನ 10 ದಿನದಲ್ಲಿ ಪೂರ್ಣಗೊಳಿಸಬೇಕು. ಭಾರಿ ಮಳೆಯ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಮುನ್ಸೂಚನೆ ಬಂದಾಗ ಡಿಸಿಗಳು ಸಾಮಾಜಿಕ ಜಾಲತಾಣ ಮೂಲಕ ಹೆಚ್ಚಿನ ಪ್ರಚಾರ ನೀಡುವುದರಿಂದ ಜನ ಮತ್ತು ಜಾನುವಾರುಗಳಿಗೆ ಆಗುವ ಅನಾಹುತಗಳನ್ನು ತಪ್ಪಿಸಬಹುದಾಗಿದೆ ಎಂದಿದ್ದಾರೆ.
ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾದ ಬೆಳೆ ಮತ್ತು ಮನೆ ಹಾನಿಗಳನ್ನು ಅಗಸ್ಟ್ 3 ರಿಂದ 7ರ ವರೆಗೆ ಮುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications