ದಿವಂಗತ ಖಮರುಲ್ ಇಸ್ಲಾಂ ಪತ್ನಿ ಚುನಾವಣೆ ಸ್ಪರ್ಧೆಗೆ ಸಿದ್ಧ

ಕಲಬುರಗಿ, ಏಪ್ರಿಲ್ 3: ಸಚಿವರಾಗಿದ್ದ ಖಮರುಲ್ ಇಸ್ಲಾಂ ದಿವಂಗತರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಖನ್ನಿಸಾ ಫಾತಿಮಾ ಬೇಗಂ ಕಾಂಗ್ರೆಸ್ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧ ಎಂದು ಹೇಳುವ ಮೂಲಕ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

"ನನ್ನ ಪತಿ ಖಮರುಲ್ ಇಸ್ಲಾಂ ಜನಸೇವೆಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷಕ್ಕೂ ಹಾಗೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸಲು ಸಿದ್ದಳಿದ್ದೇನೆ. ಫೆಬ್ರವರಿ 5ರಂದು ಕಲಬುರ್ಗಿಗೆ ಆಗಮಿಸಿ ಕಾರ್ಯಕರ್ತರ ಜೊತೆ ಈ ಕುರಿತು ಚರ್ಚಿಸುತ್ತೇನೆ" ಎಂದು ತಿಳಿಸಿದ್ದಾರೆ.

Khanneesa Begam

ಖಮರುಲ್ ಇಸ್ಲಾಂ ತಮ್ಮ 69ನೇ ವಯಸ್ಸಿನಲ್ಲಿ ನಿಧನರಾದರು. ಕರ್ನಾಟಕ ಅದರಲ್ಲೂ ಹೈದರಾಬಾದ್ - ಕರ್ನಾಟಕದ ಪಾಲಿನ ಜನಪ್ರಿಯ ರಾಜಕಾರಣಿಗಳಲ್ಲಿ ಖಮರುಲ್ ಇಸ್ಲಾಂ ಕೂಡಾ ಒಬ್ಬರಾಗಿದ್ದರು. ಕಲಬುರಗಿ ಉತ್ತರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 2013ರಿಂದ 2016ರವರೆಗೆ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

2016ರಲ್ಲಿ ಸಚಿವ ಸಂಪುಟ ಪುನಾರಚನೆ ಮಾಡಿದಾಗ ಅವರನ್ನು ಸಂಪುಟದಿಂದ ಕೈ ಬಿಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+