ಸರ್ಕಾರ ಗೂಂಡಾಗಿರಿ ಮಾಡುತ್ತಿದೆ : ಯಡಿಯೂರಪ್ಪ

ಕಲಬುರಗಿ, ಡಿಸೆಂಬರ್. 11 : ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ಮಾತನಾಡಿದ ಯಡಿಯೂರಪ್ಪ, 'ಸರ್ಕಾರವೇ ಬಿಜೆಪಿಯವರ ಮೇಲೆ ಗೂಂಡಾಗಿರಿ‌ ಮಾಡುತ್ತಿದೆ, ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ' ಎಂದು ದೂರಿದರು.

Lathi charge on BJP workers in Kumata : Yeddyurappa slams Govt

'ಶಾಂತಿಯುತ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಲಾಠಿ ಚಾರ್ಜ್ ಮಾಡುವಂತಹದ್ದು ಏನಿತ್ತು?' ಎಂದು ಯಡಿಯೂರಪ್ಪ ಪ್ರಶ್ನಿಸಿದರು.

'ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಕುಮಟಾದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಗುತ್ತದೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ' ಎಂದರು.

ಪರೇಶ್ ಮೆಸ್ತ್ ಸಾವು ಖಂಡಿಸಿ ಉತ್ತರ ಕನ್ನಡದ ವಿವಿಧ ತಾಲೂಕುಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕುಮಟಾದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+