ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸೆ. 24ರಂದು ಬೃಹತ್ ಸಮಾವೇಶ
ಕಲಬುರಗಿ, ಸೆಪ್ಟೆಂಬರ್ 21 : ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ರಾಜ್ಯದಲ್ಲಿ ಮತ್ತೊಂದು ವೇದಿಕೆ ಸಿದ್ಧವಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂದಾಳತ್ವ ವಹಿಸಿಕೊಂಡಿರುವ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಇದೇ ಭಾನುವಾರ (ಸೆಪ್ಟೆಂಬರ್ 24) ಕಲಬುರಗಿಯಲ್ಲಿ ಲಿಂಗಾಯತ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಲಿಂಗಾಯತ ಸಮಾವೇಶಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ. ಪಕ್ಷವನ್ನು ಹೊರತುಪಡಿಸಿ ಲಿಂಗಾಯತ ಸಮುದಾಯದ ಯಾರು ಬೇಕಾದರೂ ಈ ಸಮಾವೇಶದಲ್ಲಿ ಭಾಗವಹಿಸಬಹುದು ಎಂದು ಹೇಳಿದರು.
ಈ ಬೃಹತ್ ಸಮಾವೇಶದಲ್ಲಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಮನೆ ಮನೆಗೆ ತೆರಳಿ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಲಿಂಗಾಯತ ಸಮುದಾಯದವರಿಗೆ ಮನವಿ ಮಾಡಿದ್ದಾರೆ ಎಂದರು.












Click it and Unblock the Notifications