ಕಲಬುರಗಿಯಲ್ಲಿ ಲಾಕ್ ಡೌನ್ 7 ದಿನ ವಿಸ್ತರಣೆ

ಕಲಬುರಗಿ, ಜುಲೈ 20 : ಕಲಬುರಗಿ ನಗರ ಮತ್ತು ಜಿಲ್ಲೆಯ ಇತರ ತಾಲೂಕುಗಳಲ್ಲಿ ಘೋಷಣೆ ಮಾಡಿದ್ದ ಲಾಕ್ ಡೌನ್ ಅನ್ನು ಜುಲೈ 27ರ ತನಕ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜುಲೈ 13ರಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಕಲಬುರಗಿ ನಗರ ಮತ್ತು ಇತರ ತಾಲೂಕುಗಳಲ್ಲಿ ಜುಲೈ 14ರಿಂದ 20ರ ತನಕ ಲಾಕ್ ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು. ಈಗ ಅದನ್ನು ಜುಲೈ 27ರ ಮಧ್ಯರಾತ್ರಿ ತನಕ ವಿಸ್ತರಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಭಾನುವಾರವೂ 69 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2743ಕ್ಕೆ ಏರಿಕೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 46 ಜನರು ಮೃತಪಟ್ಟಿದ್ದಾರೆ.

Sharath B

ಜುಲೈ 14, 15ರಂದು ವಿವಿಧ ಜಿಲ್ಲೆಗಳು ಲಾಕ್ ಡೌನ್ ಘೋಷಣೆ ಮಾಡಿದ್ದವು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಘೋಷಣೆ ಮಾಡಿರುವ ಲಾಕ್ ಡೌನ್ ಬುಧವಾರ ಮುಂಜಾನೆ ತನಕ ಜಾರಿಯಲ್ಲಿದೆ. ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ದಕ್ಷಿಣ ಕನ್ನಡ, ಧಾರವಾಡ, ಯಾದಗಿರಿ ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿಲ್ಲ. ಶಿವಮೊಗ್ಗ ಮತ್ತು ಗದಗ ಜಿಲ್ಲೆಯಲ್ಲಿ ಅರ್ಧ ದಿನದ ಲಾಕ್ ಡೌನ್ ಜಾರಿಯಲ್ಲಿದೆ. ವ್ಯಾಪಾರ ವಹಿವಾಟಿಗೆ ಸಮಯ ನಿಗದಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+