ಕಲಬುರಗಿಯಲ್ಲಿ ಲಾಕ್ ವಿಸ್ತರಣೆ ಇಲ್ಲ; ಡಿಸಿ ಆದೇಶ ವಾಪಸ್

ಕಲಬುರಗಿ, ಜುಲೈ 22 : ಕಲಬುರಗಿ ನಗರ ಮತ್ತು ಇತರ ತಾಲೂಕುಗಳಲ್ಲಿ ಬುಧವಾರದಿಂದ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಲಾಕ್ ಡೌನ್ ಅನ್ನು ಜುಲೈ 27ರ ಮಧ್ಯರಾತ್ರಿ ತನಕ ವಿಸ್ತರಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ.

ಕಲಬುರಗಿ ನಗರ ಮತ್ತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜುಲೈ 27ರ ವರೆಗೆ ಘೋಷಣೆ ಮಾಡಲಾಗಿದ್ದ ಲಾಕ್ ಡೌನ್ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಹಿಂಪಡೆದು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ್ದು. "ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಇನ್ನು ಮುಂದೆ ಲಾಕ್ ಡೌನ್ ಇರುವುದಿಲ್ಲ" ಎಂದು ಘೋಷಣೆ ಮಾಡಿದ್ದರು.

Lockdown Extension Withdrawn In Kalaburagi

ಯಡಿಯೂರಪ್ಪ ಅವರ ಭಾಷಣದ ಬಳಿಕ ಕಲಬುರಗಿಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಜಿಲ್ಲೆಯಲ್ಲಿ ಮಂಗಳವಾರ 99 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,966ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಜುಲೈ 14ರಿಂದ 20ರ ತನಕ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಬಳಿಕ ಜುಲೈ 20ರಂದು ಅದನ್ನು ಜುಲೈ 27ರ ಮಧ್ಯರಾತ್ರಿ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+