ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 14ರಿಂದ ಕಲಬುರಗಿ ಜಿಲ್ಲೆಯಲ್ಲಿ ಲಾಕ್ ಡೌನ್

|
Google Oneindia Kannada News

ಕಲಬುರಗಿ, ಜುಲೈ 13 : ಕಲಬುರಗಿ ನಗರ ಮತ್ತು ಜಿಲ್ಲೆಯ ಇತರ ತಾಲೂಕುಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2,192.

ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಜಿಲ್ಲಾಧಿಕಾರಿ ಶರತ್ ಬಿ. ಲಾಕ್ ಡೌನ್ ಮಾಡುವ ಕುರಿತು ತೀರ್ಮಾನ ಕೈಗೊಂಡಿದ್ದಾರೆ. ಇಂದು ಜಿಲ್ಲೆಯಲ್ಲಿ 89 ಹೊಸ ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ.

ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ

Lockdown In Kalaburagi Form July 14 To 20

ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಕಲಬುರಗಿ ನಗರ ಮತ್ತು ಇತರ ತಾಲೂಕುಗಳಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ. ಜುಲೈ 14ರಿಂದ 20ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಆದೇಶದಲ್ಲಿ ತಿಳಿಸಿದ್ದಾರೆ.

ಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತಮದುವೆ ಕುರಿತು ಹೊಸ ಆದೇಶ ಹೊರಡಿಸಿದ ಕಲಬುರಗಿ ಜಿಲ್ಲಾಡಳಿತ

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ನಿಯಂತ್ರಿಸುವ ಸಲುವಾಗಿ ಕಲಬುರಗಿ ಜಿಲ್ಲೆಯ ಕಲಬುರಗಿ ನಗರ ಹಾಗೂ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ತಾಲೂಕುಗಳ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಭಯದ ನಡುವೆಯೂ ಕಲಬುರಗಿ ಜನರಿಗೊಂದು ಖುಷಿ ಸುದ್ದಿಭಯದ ನಡುವೆಯೂ ಕಲಬುರಗಿ ಜನರಿಗೊಂದು ಖುಷಿ ಸುದ್ದಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಕುರಿತು ಮಂಗಳವಾರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

English summary
Kalaburagi deputy commissioner Sharat.B ordered for lock down from July 14 to 20, 2020 entire Kalaburagi city and all taluks of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X