ಕಲಬುರಗಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Posted By:
Subscribe to Oneindia Kannada

ಕಲಬುರಗಿ, ಫೆಬ್ರವರಿ 7: ಪ್ರತಿ ಕ್ವಿಂಟಾಲ್ ತೊಗರಿಗೆ ಬೆಂಬಲ ಬೆಲೆ ಆಗ್ರಹಿಸಿ ರೈತ ಸಂಘವು ಕರೆದಿದ್ದ ಜಿಲ್ಲಾ ಬಂದ್ ಗೆ ಕಲಬರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿ ಕ್ವಿಂಟಾಲ್ ತೊಗರಿಗೆ ಏಳೂವರೆ ಸಾವಿರ ಬೆಂಬಲ ನೀಡಬೇಕೆಂದು ರೈತ ಸಂಘ ಸರ್ಕಾರವನ್ನು ಆಗ್ರಹಿಸಿದೆ.

ನಗರದ ಕೇಂದ್ರ ವೃತ್ತದಲ್ಲಿ ಬೆಳಗ್ಗೆ ರೈತ ಸಂಘದ ಕೆಲವಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದಾಗ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಅದು ಬಿಟ್ಟರೆ, ನೆಹರೂ ಗಂಜ್ ನಲ್ಲಿರುವ ಎಪಿಎಂಸಿ ಆವರಣದಲ್ಲಿನ ಕೆಲ ಅಂಗಡಿಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದರು.

Low response for Bandh called by Raitha Sangha in Kalaburagi

ಆದರೆ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಬಹುತೇಕ ಭಾಗಗಳಲ್ಲಿ ಜನಜೀವನ ಸಾಮಾನ್ಯ ಸ್ಥಿತಿಯಂತೆಯೇ ಇತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Badh called by local Raitha Sangha demanding supportive price for Tur dal recieved mixed response as local bus service was stopped. But, Schools and colleges were run as usual.
Please Wait while comments are loading...