ಸಿದ್ದರಾಮಯ್ಯ ಮೇಲಿನ ಮುನಿಸಿನ ಬಗ್ಗೆ ಖರ್ಗೆ ಹೇಳಿದ್ದು ಹೀಗೆ...
Recommended Video

ಕಲಬುರಗಿ, ಏಪ್ರಿಲ್ 18: ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆದಿದೆ. ಅದರಲ್ಲಿಯೂ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ನಡುವೆ ಮುನಿಸು ಏರ್ಪಟ್ಟಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಮುನಿಸು ಏರ್ಪಟ್ಟಿದೆ ಎಂಬುದು ಸಂಪೂರ್ಣ ಸುಳ್ಳು, ಇದೆಲ್ಲಾ ಮಾಧ್ಯಮಗಳ ಸೃಷ್ಠಿ ಅಷ್ಟೆ' ಎಂದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
'ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೈಕಮಾಂಡ್ ಬಳಿ ಕೇಳಿರಲೇ ಇಲ್ಲ ಎಂದ ಅವರು ಬಾದಾಮಿ ಕ್ಷೇತ್ರದಿಂದ ಅವರು ಸ್ಪರ್ಧಿಸಬೇಕೆಂಬುದು ಕಾರ್ಯಕರ್ತರ ಒತ್ತಾಯ' ಎಂದರು.

ಕಾಂಗ್ರೆಸ್‌ನ ಯಾವುದೇ ನಾಯಕರ ನಡುವೆ ಮುನಿಸು ಇಲ್ಲ ಎಂದ ಖರ್ಗೆ, 'ಈ ಬಾರಿ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಹಾಗೂ ಗೆಲ್ಲುತ್ತೇವೆ ಕೂಡಾ' ಎಂದು ಅವರು ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಏಳು ಜನ ಶಾಸಕರು ಹಾಗೂ ಅಶೋಕ್ ಖೇಣಿ ಅವರಿಗೆ ಟಿಕೆಟ್‌ಗೆ ನೀಡಲು ಖರ್ಗೆ ವಿರೋಧ ವ್ಯಕ್ತಪಡಿಸಿದ್ದರು ಆದರೆ ಸಿದ್ದರಾಮಯ್ಯ ಅವರು ಅವರಿಗೆ ಟಿಕೆಟ್ ಕೊಡಿಸಲು ಸಫಲರಾಗಿದ್ದರು ಹಾಗಾಗಿ ಇಬ್ಬರು ನಾಯಕರ ನಡುವೆ ಮುನಿಸು ಏರ್ಪಟ್ಟಿದೆ ಎನ್ನಲಾಗಿತ್ತು.











Click it and Unblock the Notifications