ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆಯಿರಿ : ಖರ್ಗೆ

Posted By:
Subscribe to Oneindia Kannada

ಕಲಬುರಗಿ, ಜುಲೈ 25 : 'ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಜುಲೈ 25ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ಪಡೆಯಬೇಕು' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಭಾನುವಾರ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಅವರು ಮಾತನಾಡಿದರು.[ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಏಕೆ, ಏನು?]

'ಸಾರಿಗೆ ನೌಕರರು ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಸರ್ಕಾರದೊಂದಿಗೆ ತಮ್ಮ ಬೇಡಿಕೆಗಳ ಬಗ್ಗೆ ಪರಸ್ಪರ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು, ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ' ಎಂದು ಖರ್ಗೆ ಹೇಳಿದರು.[Live : 'ಶೇ 30ರಷ್ಟು ವೇತನ ಹೆಚ್ಚಳ ಸಾಧ್ಯವಿಲ್ಲ']

ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.[ಗ್ಯಾಲರಿ : ಬಸ್ ಇಲ್ಲದೆ ಜನರ ಪರದಾಟ]

'ಕೋಟ್ಯಾಂತರ ರೂಪಾಯಿ ನಷ್ಟ ವಾಗಲಿದೆ'

'ಕೋಟ್ಯಾಂತರ ರೂಪಾಯಿ ನಷ್ಟ ವಾಗಲಿದೆ'

'ಸಾರಿಗೆ ನೌಕರರ ಮುಷ್ಕರದಿಂದ ಪ್ರತಿದಿನ 15 ರಿಂದ 20 ಕೋಟಿ ರೂ. ನಷ್ಟವಾಗಲಿದೆ. ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ, ರೋಗಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ನೌಕರರು ಮುಷ್ಕರ ಕೈ ಬಿಡಬೇಕೆಂದು' ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

'ಸರ್ಕಾರದೊಂದಿಗೆ ಚರ್ಚೆ ನಡೆಸಿ'

'ಸರ್ಕಾರದೊಂದಿಗೆ ಚರ್ಚೆ ನಡೆಸಿ'

ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. 'ಮುಷ್ಕರವನ್ನು ಕೈಬಿಟ್ಟು ಸರ್ಕಾರದೊಂದಿಗೆ ತಮ್ಮ ಬೇಡಿಕೆಗಳ ಬಗ್ಗೆ ಪರಸ್ಪರ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು' ಎಂದು ಖರ್ಗೆ ನೌಕರರಿಗೆ ಸಲಹೆ ನೀಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ

ಶಾಲಾ-ಕಾಲೇಜುಗಳಿಗೆ ರಜೆ

ಸಾರಿಗೆ ಸಂಸ್ಥೆಗಳ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ಸರ್ಕಾರ ಜು.25 ಮತ್ತು 26ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಜುಲೈ 25ರಂದು ಮಾತ್ರ ರಜೆ ನೀಡಲಾಗಿದೆ.

ಹಲವು ಸಂಘಟನೆಗಳ ಬೆಂಬಲ

ಹಲವು ಸಂಘಟನೆಗಳ ಬೆಂಬಲ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಎಐಟಿಯುಸಿ, ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಳ, ಸಿಐಟಿಯು ಸೇರಿದಂತೆ ಆರರಿಂದ ಎಂಟು ಸಂಘಟನೆಗಳು ಬೆಂಬಲ ನೀಡಿವೆ.

ಸಂಧಾನ ಸಭೆ ವಿಫಲವಾಗಿದೆ

ಸಂಧಾನ ಸಭೆ ವಿಫಲವಾಗಿದೆ

ಮುಷ್ಕರ ನಡೆಸುತ್ತಿರುವ ನೌಕರರ ಜೊತೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನಡೆಸಿದ ಸಂಧಾನ ಸಭೆ ಮುರಿದುಬಿದ್ದಿದೆ. ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಶೇ 35ರಷ್ಟು ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Lok Sabha Congress leader Mallikarjuna Kharge appealed the transport employees to withdraw strike. Transport Corporation employees called for strike from July 25, 2016 demanded for 35 percent salary hike.
Please Wait while comments are loading...