ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಫಲಿತಾಂಶ, ಅಂಕಪಟ್ಟಿ ವಿಳಂಬ: ವಿದ್ಯಾರ್ಥಿಗಳ ಪರದಾಟ

By ರಾಯಚೂರು ಪ್ರತಿನಿಧಿ
|
Google Oneindia Kannada News

ಕಲಬುರಗಿ, ಜನವರಿ 13 : ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿನ ಆಡಳಿತಾತ್ಮಕ ಸಮಸ್ಯೆಗಳಿಂದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು, ಫಲಿತಾಂಶ, ಅಂಕಪಟ್ಟಿಗಳು ನಿಗದಿತ ಅವಧಿಯಲ್ಲಿ ಸಿಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ರಾಜ್ಯದ ಇತರೆ ವಿಶ್ವ ವಿದ್ಯಾಲಯಗಳ ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಅಂಕಪಟ್ಟಿ ಸೇರಿದಂತೆ ಅಗತ್ಯ ದಾಖಲೆ ನಿಗದಿತ ಅವಧಿಯಲ್ಲಿ ನೀಡಲಾಗುತ್ತಿದೆ. ಆದರೆ, ಗುಲ್ಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜು, ಸ್ನಾತಕೋತ್ತರ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ಪರೀಕ್ಷೆ ನಡೆಯಿಸಿ, ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡದಿರುವುದು ಸಾಕಷ್ಟು ಸಮಸ್ಯೆ ತಂದಿದೆ.

ಲಿಂಗಸುಗೂರು ತಾಲೂಕಿನ ಒಳಬಳ್ಳಾರಿ ಚೆನ್ನಬಸವೇಶ್ವರ ಮಹಾವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀಮತಿ ಮಹಾಂತಮ್ಮ ಲಿಂಗನಗೌಡ ಮಹಾವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುದಗಲ್ಲ, ಸಜ್ಜಲಶ್ರೀ ಮಹಾವಿದ್ಯಾಲಯ ನಾಗರ ಹಾಳ ಸೇರಿದಂತೆ ಇತರೆ ಮಹಾ ವಿದ್ಯಾಲಯ, ಸ್ನಾತಕೋತ್ತರ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳು ಫಲಿತಾಂಶ, ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣ ಪತ್ರ, ತಾತ್ಕಾಲಿಕ ಪದವಿ ಪ್ರಮಾಣ ಪತ್ರ ಪಡೆಯಲು ಹರಸಾಹಸ ಪಡಬೇಕಾಗಿದೆ.

Marks Card And Exam Result Delayed In Gulbarga University

ಕೆಲ ವರ್ಷಗಳಿಂದ ಅಂಕಪಟ್ಟಿ ತಿದ್ದುಪಡಿ, ತಾತ್ಕಾಲಿಕ ಪದವಿ ಪ್ರಮಾಣ ಪತ್ರ, ಮರು ಮೌಲ್ಯಮಾಪನ ಫಲಿತಾಂಶ ಸೇರಿದಂತೆ ಶೈಕ್ಷಣಿಕ ತೊಂದರೆಗಳ ನಿವಾರಣೆಗೆ ಹಣ ಪಾವತಿಸಿ ಅರ್ಜಿ ಸಲ್ಲಿಸಿದ ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಿರುದ್ಯೋಗಿಗಳಾಗಿ ಅಲೆದಾಡುವಂತಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕಾಲೇಜು ಅಧ್ಯಾಪಕರ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ಚಂದ್ರಶೇಖರ ಪಾಟೀಲ್‌ ಮಾತನಾಡಿ, "ರಾಜ್ಯದ ಇತರೆ ವಿಶ್ವ ವಿದ್ಯಾಲಯಗಳ ಆಡಳಿತ ಮಾದರಿ, ನಿಗದಿತ ಅವಧಿಯಲ್ಲಿ ಪರೀಕ್ಷೆ, ಫಲಿತಾಂಶ ದಾಖಲೆಗಳ ಪೂರೈಕೆ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಗುತ್ತಿಲ್ಲ. ತಾವು ಮಕ್ಕಳ ಸಮಸ್ಯೆ ಕಾಲೇಜುಗಳ ಸಮಸ್ಯೆ ಕುರಿತು ಸಾಕಷ್ಟು ಬಾರಿ ಗಮನಕ್ಕೆ ತಂದಿದ್ದರು ಪ್ರಯೋಜನವಾಗುತ್ತಿಲ್ಲ. ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು" ಎಂದು ಆಗ್ರಹಿಸಿದರು.

ಈ ಬಗ್ಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲ ಸಚಿವರು (ಮೌಲ್ಯಮಾಪನ) ಜ್ಯೋತಿಧಮ ಪ್ರಕಾಶ್‌ ಮಾತನಾಡಿದ್ದು, "ನಾನು ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವೆ. ಪರೀಕ್ಷೆ ಮತ್ತು ಫಲಿತಾಂಶ ವಿಳಂಬ ನೀತಿ, ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣಪತ್ರ ಸೇರಿದಂತೆ ಇತರೆ ದಾಖಲಾತಿ ಪಡೆಯುವಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ದೂರುಗಳು ಬಂದಿವೆ. ಆದ್ಯತೆ ಮೇರೆಗೆ ತಮ್ಮ ಅವಧಿಯಲ್ಲಿ ಎಲ್ಲ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ" ಎಂದು ತಿಳಿಸಿದ್ದಾರೆ.

English summary
Under graduation and Post graduation Marks Card and exam result delayed in Gulbarga University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X