ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ, ಕಲಬುರಗಿಯಲ್ಲಿ ಬೃಹತ್ ಸಮಾವೇಶ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 24 : ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮತ್ತೊಂದು ವೇದಿಕೆ ಸಿದ್ಧವಾಗಿದೆ. ಕಲಬುರಗಿ ನಗರದಲ್ಲಿ ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. 1 ಲಕ್ಷಕ್ಕೂ ಅಧಿಕ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

'ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಸಾಂವಿಧಾನಿಕ ಮಾನ್ಯತೆಗಾಗಿ' ಮಹಾ ಸಮಾವೇಶ ಎಂಬ ಘೋಷವಾಕ್ಯದಡಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಲಬುರಗಿಯ ಎನ್.ವ್ಹಿ.ಮೈದಾನದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ.

ವೀರಶೈವ- ಲಿಂಗಾಯತ ಒಂದೇ: ಸಿದ್ದಗಂಗಾ ಮಠದ ನಿಲುವು ಪ್ರಕಟವೀರಶೈವ- ಲಿಂಗಾಯತ ಒಂದೇ: ಸಿದ್ದಗಂಗಾ ಮಠದ ನಿಲುವು ಪ್ರಕಟ

Lingayat

ಇಂದಿನ ಸಮಾವೇಶದಲ್ಲಿ 'ರಾಷ್ಟ್ರೀಯ ಬಸವ ಸೇನಾ'ವನ್ನು ಉದ್ಘಾಟನೆ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಜನರು, ಮಠಾಧೀಶರು ಸೇರಿದಂತೆ 1 ಲಕ್ಷಕ್ಕೂ ಅಧಿಕ ಜನರು ಇಂದಿನ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಲಿಂಗಾಯತ ಧರ್ಮದ ಹೋರಾಟ ದಾರಿ ತಪ್ಪುತ್ತಿದೆಯೇ?ಲಿಂಗಾಯತ ಧರ್ಮದ ಹೋರಾಟ ದಾರಿ ತಪ್ಪುತ್ತಿದೆಯೇ?

ಗದುಗಿನ ತೋಂಟದಾರ್ಯ ಸ್ವಾಮಿಗಳು, ಇಳಕಲ್ ಮಹಾಂತಪ್ಪನವರು, ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರು, ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದ ಶ್ರೀಗಳು, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಗಳು ಸೇರಿದಂತೆ ಹಲವು ಸ್ವಾಮೀಜಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಚಿವರಾದ ಬಸವರಾಜ ರಾಯರೆಡ್ಡಿ, ಎಂ.ಬಿ. ಪಾಟೀಲ್, ಡಾ. ಶರಣಪ್ರಕಾಶ್ ಪಾಟೀಲ್, ವಿನಯ್ ಕುಲಕರ್ಣಿ ಪಾಲ್ಗೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಬಸವರಾಜ್‌‌ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯುತ್ತಿದೆ.

English summary
Mega Lingayat rally at NV Grounds Kalaburagi, Karnataka. Seers of various mutts will take part in rally. The organizers expecting the participation of over 1 lakh people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X