ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು, ಆದರೆ ಪರಮ ಸುಳ್ಳು ಹೇಳಿ ವಂಚನೆ: ಸಿದ್ದರಾಮಯ್ಯ ವಾಗ್ದಾಳಿ

ಕಲ್ಬುರ್ಗಿ, ಏಪ್ರಿಲ್ 16: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್ ಅವರಿಗೆ ಸೂಚಿಸಿದ್ದೇನೆ. ಹೀಗಾಗಿ ನೋಂದಾಯಿತರಾದ ಎಲ್ಲರಿಗೂ ಉದ್ಯೋಗ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು

Modi Has Deceived The youth of Country By Promising To Provide 2 Crore Jobs Siddaramaiah

ಉದ್ಯೋಗ ಕೊಡುವವರು, ಉದ್ಯೋಗ ಪಡೆಯುವವರನ್ನು ಒಟ್ಟಿಗೇ ಒಂದೇ ವೇದಿಕೆಯಲ್ಲಿ ತರುವ ಮೂಲಕ ಉದ್ಯೋಗಗಳನ್ನು ಒದಗಿಸುವುದಕ್ಕಾಗಿ ವಿಭಾಗಾವಾರು ಉದ್ಯೋಗಮೇಳಗಳನ್ನು ಸಂಘಟಿಸುತ್ತಿದ್ದೇವೆ ಎಂದರು.
ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಹೂಡಿಕೆ ಹೆಚ್ಚಾದಷ್ಟೂ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ. ಆದರೆ ನಮ್ಮ ಸರ್ಕಾರ ಯುವ ಜನತೆ ಕೈಗೆ ಉದ್ಯೋಗ ನೀಡಿ ಅವರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಈ ಹತ್ತು ವರ್ಷಗಳ ಅವರ ಅಧಿಕಾವಾಧಿಯಲ್ಲಿ ಇಪ್ಪತ್ತು ‌ಲಕ್ಷ ಉದ್ಯೋಗ ಕೊಡುವುದು ಅವರಿಗೆ ಆಗಿಲ್ಲ. ಇದು ಅವರೇ ಹೇಳಿದ ಮಾತಿದು. ಆದರೆ ಉದ್ಯೋಗ ನೀಡದೆ ಸುಳ್ಳು ಹೇಳಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ‌ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಯುವ‌ನಿಧಿ ಯೋಜನೆಯಡಿಯಲ್ಲಿ ಪದವಿ ನಿರುದ್ಯೋಗಿ ಯುವಕರಿಗೆ ರೂ 2000 ಹಾಗೂ ಡಿಪ್ಲೋಮಾ ಪಾಸ್ ಆದವರಿಗೆ ರೂ 1500 ಗೌರವಧನ ( ಪ್ರತಿತಿಂಗಳು) ಎರಡು ವರ್ಷದ ಅವಧಿಯವರೆಗೆ ಕೊಡುತ್ತಿದ್ದೇವೆ. ರಾಜ್ಯ ಸರ್ಕಾರ ಕೌಶಲ್ಯ ತರಬೇತಿ‌ ನೀಡಲು ಕೌಶಲ್ಯಾ ಅಭಿವೃದ್ದಿ‌ ಇಲಾಖೆ ತೆರೆದು ಅದರಡಿಯಲ್ಲಿ ಮಾರುಕಟ್ಟೆಯ ಬೇಡಿಕೆ ಅನ್ವಯ ತರಬೇತಿ ನೀಡಲಾಗುತ್ತಿದೆ. ಇಂದು ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗದಿರುವವರು ನಿರಾಸೆರಾಗಬೇಡಿ ನಿಮಗೆ ಮುಂದೊಂದು ದಿನ ಉದ್ಯೋಗ ಕೊಡಿಸುತ್ತೇವೆ.

Periodic Labour Force Survey ಪ್ರಕಾರ ದೇಶದಲ್ಲಿ ಡಿಗ್ರಿ ಪಾಸಾದವರಲ್ಲಿ 18.9% ಹಾಗೂ ಡಿಪ್ಲೋಮಾ‌ ಪಾಸಾದವರಲ್ಲಿ 17.1 ನಿರುದ್ಯೋಗ ಇದೆ. ನಮ್ಮ ರಾಜ್ಯದಲ್ಲಿ 2.5% ನಿರುದ್ಯೋಗ ಇದೆ. ಇದು ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕಡಿಮೆ. ಇದಕ್ಕೆ ರಾಜ್ಯ ಸರ್ಕಾರ ಉದ್ಯೋಗ ಒದಗಿಸಯವಲ್ಲಿ ಕೈಗೊಂಡ ಕ್ರಮಗಳೇ ಸಾಕ್ಷಿ. FDA ಹೆಚ್ಚು ಹೆಚ್ಚು ಆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತವೆ. ಕೆಕೆ ಭಾಗದ ಕೈಗಾರಿಕೆಗಳು ಬರಬೇಕೆಂದರೆ ಹೆಚ್ಚುವರಿ 60% incentive ಕೊಡಬೇಕು ಎಂದು ಖರ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ಮಾಡಿ ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಅಭಿವೃದ್ದಿಗೆ ಕ್ರಮ ವಹಿಸುತ್ತಿದೆ ಎಂದು ಸಿಎಂ ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+