ಫೆ.17ರಂದು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ

ಕಲಬುರಗಿ, ಫೆಬ್ರವರಿ 04 : 'ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 17ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ ಅವರು, 'ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಚುನಾವಣಾ ಸಮಾವೇಶ ಹುಬ್ಬಳ್ಳಿಯಿಂದ ಆರಂಭವಾಗಲಿದೆ. ಫೆ.10ರಂದು ಸಂಜೆ 4 ಗಂಟೆಗೆ ನರೇಂದ್ರ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದರು.

Narendra Modi rally in Kalaburagi on February 17

'ಧಾರವಾಡ, ಉತ್ತರ ಕನ್ನಡ, ಹಾವೇರಿ, ಗದಗ ಲೋಕಸಭಾ ಕ್ಷೇತ್ರಗಳ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಹುಬ್ಬಳ್ಳಿ ಸಮಾವೇಶದಲ್ಲಿ ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆ ಇದೆ' ಎಂದು ಅಶೋಕ ಮಾಹಿತಿ ನೀಡಿದರು.

ಈ ಸಮಾವೇಶಗಳ ಮೂಲಕ ಕರ್ನಾಟಕದಲ್ಲಿ 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಹ ರಾಜ್ಯಕ್ಕೆ ಬರಲಿದ್ದು, ಸಮಾವೇಶಗಳಲ್ಲಿ ಅವರು ಭಾಷಣ ಮಾಡಲಿದ್ದಾರೆ.

ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 20+ ಸ್ಥಾನಗಳನ್ನು ಪಡೆಯಲು ಬಿಜೆಪಿ ತಂತ್ರ ರೂಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+