ಅ.29ರಂದು ಬೀದರ್-ಕಲಬುರಗಿ ರೈಲ್ವೆ ಮಾರ್ಗ ಲೋಕಾರ್ಪಣೆ

Posted By: Gururaj
Subscribe to Oneindia Kannada

ಕಲಬುರಗಿ, ಅಕ್ಟೋಬರ್ 20 : ಮಹತ್ವದ ಬೀದರ್-ಕಲಬುರಗಿ ರೈಲ್ವೆ ಮಾರ್ಗ ಸಂಚಾರಕ್ಕೆ ಸಿದ್ಧವಾಗಿದೆ. ಅಕ್ಟೋಬರ್ 29ರಂದು ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಅಕ್ಟೋಬರ್ 29ರಂದು ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳ, ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೀದರ್‌ನಲ್ಲಿ ಬೀದರ್-ಕಲಬುರಗಿ ರೈಲ್ವೆ ಮಾರ್ಗದಲ್ಲಿ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಅಕ್ಟೋಬರ್ 29ಕ್ಕೆ ಧರ್ಮಸ್ಥಳಕ್ಕೆ ನರೇಂದ್ರ ಮೋದಿ

modi

ಬೀದರ್-ಕಲಬುರಗಿ ರೈಲು ಮಾರ್ಗ ಯೋಜನೆ ಹೈದರಾಬಾದ್ ಕರ್ನಾಟಕ ಭಾಗದ ಮಹತ್ವದ ಯೋಜನೆಯಾಗಿದೆ. 1999ರಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆ ಈಗ ಪೂರ್ಣಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ.

ಸುಮಾರು 110 ಕಿ.ಮೀ.ಗಳ ರೈಲು ಮಾರ್ಗವಿದಾಗಿದೆ. ಈ ಮಾರ್ಗದಲ್ಲಿ 14 ಬೃಹತ್ ಸೇತುವೆ. 183 ಸಣ್ಣ ಸೇತುವೆಗಳಿವೆ. ಬೀದರ್-ಕಲಬುರಗಿ ನಡುವೆ 13 ರೈಲ್ವೆ ನಿಲ್ದಾಣಗಳು ಇರಲಿವೆ.

ಕಲಬುರಗಿಯಿಂದ ಸೊಲ್ಲಾಪುರದ ವರೆಗಿನ ದ್ವಿಪಥ ರೈಲು ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯೂ ಪೂರ್ಣಗೊಂಡರೆ ಬೆಂಗಳೂರಿನಿಂದ ಕಲಬುರಗಿಗೆ ತೆರಳಲು ಒಂದೂವರೆ ತಾಸಿನಷ್ಟು ಸಮಯ ಉಳಿತಾಯವಾಗಲಿದೆ.

ಅ.29ರಂದು ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi will inaugurate the Bidar-Kalaburagi railway line on October 29, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ