• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೀಪಾವಳಿ ಹಬ್ಬ ಹಿನ್ನೆಲೆ: ಈ.ಕ.ರ.ಸಾ.ಸಂಸ್ಥೆಯಿಂದ ಹೆಚ್ಚಿನ ಬಸ್‍

|

ಕಲಬುರಗಿ, ನ.7: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನವೆಂಬರ್ 14ರ ನರಕ ಚತುರ್ದಶಿ, ನ.15ರ ದೀಪಾವಳಿ ಅಮಾವಾಸ್ಯೆ ಹಾಗೂ ನವೆಂಬರ್ 16 ರಂದು ಬಲಿಪಾಡ್ಯಮಿ ಇರುವ ಪ್ರಯುಕ್ತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಜಿಲ್ಲೆಗಳಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಅಗತ್ಯಕ್ಕೆ ತಕ್ಕಂತೆ ಸುಮಾರು 220 ಸಾರಿಗೆ ಬಸ್‍ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ತಿಳಿಸಿದ್ದಾರೆ.

ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಂದ ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ದಾವಣಗೆರೆ ನಗರಗಳ ನಡುವೆ ಜನದಟ್ಟಣೆ ನಿರೀಕ್ಷಿಸಿ ಕಾರ್ಯಾಚರಣೆಗೆ ಹೆಚ್ಚಿನ ಬಸ್ ಸೇವೆ ಕಲ್ಪಿಸಲಾಗಿದೆ.

ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ

ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ವ್ಯವಸ್ಥಾಪಕ ನಿರ್ದೇಶಕರು ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.

ಟಿಕೇಟ್ ದರದ ಮೇಲೆ ಶೇ.5 & 10 ರಷ್ಟು ರಿಯಾಯಿತಿ: ಈ ಸಾರಿಗೆಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನ ಕಾಯ್ದಿರಿಸುವಾಗ 4 ಅಥವಾ 4ಕ್ಕಿಂತ ಹೆಚ್ಚಿನ ಜನರ ಗುಂಪಿನ ಒಂದೇ ಟಿಕೆಟ್ ಪಡೆದುಕೊಂಡಲ್ಲಿ ಮೂಲ ಟಿಕೆಟ್ ದರದ ಶೇ.5 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ಹೋಗುವಾಗ ಮತ್ತು ಬರುವಾಗಿನ ಆಸನಗಳನ್ನು ಒಮ್ಮೆಲೇ ಕಾಯ್ದಿರಿಸಿದಲ್ಲಿ ಬರುವಾಗಿನ ಮೂಲ ಟಿಕೆಟ್ ದರದ ಮೇಲೆ ಶೇ.10ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಎಂ. ಕೂರ್ಮರಾವ್ ತಿಳಿಸಿದರು.

English summary
Kalaburagi: North Eastern Karnataka Road Transport Corporation run 220 Deepavali Special buses from November 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X