ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಬಸ್ ವ್ಯವಸ್ಥೆ, 5 ರೂ. ದರ

ಕಲಬುರಗಿ, ಫೆಬ್ರವರಿ 01: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7 ರವರೆಗೆ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಮ್ಮೇಳನಕ್ಕೆ ಆಗಮಿಸುವ ಜನರಿಗಾಗಿ ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿದ್ದಾರೆ.

ಕಲಬುರಗಿ ನಗರದ ಎಲ್ಲಾ ಬಡಾವಣೆಗಳಿಂದ ಸಮ್ಮೇಳನ ನಡೆಯುವ ಸ್ಥಳವಾದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶೇಷ ಮತ್ತು ಹೆಚ್ಚುವರಿ ನಗರ ಸಾರಿಗೆ ಬಸ್ಸುಗಳನ್ನು ಓಡಿಸಲಾಗುತ್ತಿದೆ. ಕಲಬುರಗಿ ನಗರದಲ್ಲಿ ಸಂಚರಿಸುವ ಎಲ್ಲಾ ನಗರ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯಾವುದೇ ಸ್ಥಳದಲ್ಲಿ ಹತ್ತಿ ಇಳಿದರೂ 5. ರೂ. ಪಾವತಿಸಬೇಕು.

NEKRTC Special Bus For 85th Kannada Sahitya Sammelana

ಪ್ರವಾಸೋದ್ಯಮ ಇಲಾಖೆಯಿಂದ ಕಲಬುರಗಿ ನಗರದಲ್ಲಿನ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಸಂಸ್ಥೆಗೆ ವಾಹನ ಕೇಳಿದ್ದಲ್ಲಿ ಕನಿಷ್ಠ 30 ಜನ ಪ್ರಯಾಣಿಕರಿದ್ದಲ್ಲಿ ಪ್ರತಿ ಪ್ರಯಾಣಿಕರಿಂದ 125 ರೂ. ಗಳನ್ನು ಪಡೆದು ಸಂಸ್ಥೆಯಿಂದ ವಾಹನಗಳನ್ನು ಓಡಿಸಲಾಗುತ್ತದೆ.

ಸಾಹಿತ್ಯ ಸಮ್ಮೇಳನ ನಡೆಯುವ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದು ಹೋಗಲು ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+