ಕಲಬುರಗಿ ಜನರಿಗೆ ಸಿಹಿಸುದ್ದಿ ನೀಡಿದ ಡಿಜಿಸಿಎ

ಕಲಬುರಗಿ, ಮೇ 19; ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಕರ್ನಾಟಕದ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕಾಫ್‌ಗೆ ಅನುಮತಿ ನೀಡಿದೆ. 2019ರ ನವೆಂಬರ್ 22ರಂದು ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತ್ತು.

ಉಡಾನ್ ಯೋಜನೆಗೆ ಸೇರ್ಪಡೆಗೊಂಡಿರುವ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ಲ್ಯಾಂಡಿಂಗ್ ಮತ್ತು ಟೇಕಾಫ್‌ಗೆ ಅನುಮತಿ ನೀಡಬೇಕು ಎಂಬ ಬೇಡಿಕೆ ಎರಡು ವರ್ಷಗಳಿಂದ ಇತ್ತು. ಈ ಡಿಜಿಸಿಎ ಇದಕ್ಕೆ ಅನುಮತಿ ನೀಡಿದೆ.

Night Flight Landing And Take Off At Kalaburagi Airport DGCA Approved

ಕಲಬುರಗಿ ನಗರದ ಹೊರವಲಯದಲ್ಲಿ ಸುಮಾರು 740 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದು ದೇಶದಲ್ಲಿಯೇ 3ನೇ ಅತಿದೊಡ್ಡ ರನ್ ವೇಯನ್ನು ಹೊಂದಿದೆ. ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿತ್ತು.

ಕಲಬುರಗಿ ವಿಮಾನ ನಿಲ್ದಾಣ; ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಡಾ. ಚಿಲಕಾ ಮಹೇಶ ಮಾತನಾಡಿ, "ಕಳೆದ ಆರು ತಿಂಗಳಿನಿಂದ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೇವೆಗೆ ಅಗತ್ಯವಾಗಿದ್ದ ಏರ್‌ಪೋರ್ಟ್‌ ಗ್ರೌಂಡ್ ಲೈಟಿಂಗ್, ರನ್‌ ವೇ ಮೂಲ ಸೌಕರ್ಯ ಮುಂತಾದ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು" ಎಂದು ಹೇಳಿದ್ದಾರೆ.

Night Flight Landing And Take Off At Kalaburagi Airport DGCA Approved

ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ರನ್ ವೇ -27(ಪೂರ್ವ) ಮಾರ್ಗದ ಮೂಲಕ ವಿಮಾನ ಹಾರಾಟಕ್ಕೆ ಅನುಮತಿ ಸಿಕ್ಕಿದೆ. ರನ್‌ ವೇ-9 (ಪಶ್ಚಿಮ) ಸಮೀಪದ ಬೆಟ್ಟದ ಮೇಲೆ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಇದ್ದು, ಅಲ್ಲಿನ ತಡೆಗೋಡೆ ತೆರವುಗೊಳಿಸಿದ ಬಳಿಕ ರನ್ ವೇ ಎರಡೂ ಬದಿಯಲ್ಲಿಯೂ ಹಾರಾಟಕ್ಕೆ ಅನುಮತಿ ಸಿಗಲಿದೆ.

ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ; ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರಾಯೋಗಿ ಹಾರಾಟ ನಡೆಸಲಾಗಿತ್ತು. ಹೈದರಾಬಾದ್‌ನ ಎಷಿಯನ್ ಫೆಸಿಫಿಕ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿಯ ಡೈಮಂಡ್-40 ಮತ್ತು ಡೈಮಂಡ್-42 ಎಂಬ 4 ಅಸನವುಳ್ಳ ಎರಡು ಲಘು ವಿಮಾನಗಳು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದವು.

ಬಳಿಕ 2019ರ ಅಕ್ಟೋಬರ್‌ನಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಲಾಗಿತ್ತು. 2019ರ ನವೆಂಬರ್ 22ರಂದು ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತ್ತು. ಪ್ರಸ್ತುತ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಗೆ ಕಲಬುರಗಿಯಿಂದ ವಿಮಾನದ ಸಂಪರ್ಕವಿದೆ.

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಹತ್ತಿರ ಸುಮಾರು 175.57 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಒಟ್ಟು ಮೂರು ಪ್ಯಾಕೇಜ್‌ಗಳಾಗಿ ವಿಂಗಡನೆ ಮಾಡಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿತ್ತು.

ಕರ್ನಾಟಕ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ಅನುದಾನವನ್ನು ನೀಡಿ ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದೆ. ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ ಮಾಡಲು ಸಹ ಇಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಕರ್ನಾಟಕ ಸರ್ಕಾರ ಆಗಸ್ಟ್ 24ರಂದು ವಾಣಿಜ್ಯ ಸಂಚಾರ ಆರಂಭಿಸುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿತ್ತು.

30-08-2019 ರಂದು ಕಲಬುರಗಿ ವಿಮಾನ ನಿಲ್ದಾಣ ಮತ್ತು 742.23 ಎಕರೆ ಪ್ರದೇಶವನ್ನು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್. ಜ್ಞಾನೇಶ್ವರ ರಾವ್ ಮತ್ತು ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯಗೆ ಹಸ್ತಾಂತರ ಮಾಡಲಾಗಿತ್ತು. ಬಳಿಕ ವಿಮಾನಗಳ ಸಂಚಾರ ಆರಂಭವಾಗಿತ್ತು.

ನೈಟ್‌ ಲ್ಯಾಂಡಿಂಗ್ ಮತ್ತು ಟೇಕಾಫ್‌ಗೆ ಅನುಕೂಲವಾಗುವಂತೆ ನಿಲ್ದಾಣದ ಸುತ್ತಲಿನ 20 ಮೀಟರ್‌ನಿಂದ 5 ಕಿ. ಮೀ. ವ್ಯಾಪ್ತಿಯಲ್ಲಿ ಎತ್ತರದ ಮರ, ವಿದ್ಯುತ್ ಕಂಬ ತೆರವುಗೊಳಿಸಲಾಗಿತ್ತು. ರನ್‌ ವೇಯನ್ನು 140 ಮೀಟರ್‌ನಿಂದ 280 ಮೀಟರ್‌ಗೆ ವಿಸ್ತರಿಸಲಾಗಿತ್ತು. ಏಪ್ರಿಲ್‌ನಲ್ಲಿ ಡಿಜಿಸಿಎ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ರಾತ್ರಿ ಲ್ಯಾಂಡಿಂಗ್‌ಗೆ ಅನುಮತಿ ನೀಡುವ ಕುರಿತು ಮೂಲ ಸೌಕರ್ಯಗಳ ಪರಿಶೀಲನೆಯನ್ನು ಕೈಗೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+