ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏ.24ರ ತನಕ ಸರ್ಕಾರಿ ಕಚೇರಿ ವೇಳಾಪಟ್ಟಿ ಬದಲಾವಣೆ ಇಲ್ಲ

|
Google Oneindia Kannada News

ಕಲಬುರಗಿ, ಮಾರ್ಚ್ 29 : ಬಿಸಿಲಿನ ಹಿನ್ನಲೆಯಲ್ಲಿ ಏಪ್ರಿಲ್ 1 ರಿಂದ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿತ್ತು. ಆದರೆ, ಕಲಬುರಗಿಯಲ್ಲಿ ಏಪ್ರಿಲ್ 24ರ ತನಕ ವೇಳಾಪಟ್ಟಿ ಬದಲಾವಣೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಗುಲ್ಬರ್ಗಾ ಲೋಕಸಭಾ (ಮೀಸಲು) ಮತಕ್ಷೇತ್ರದ ಚುನಾವಣೆ ಕಾರ್ಯದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲಾಗುವುದಿಲ್ಲ. ಏಪ್ರಿಲ್ 1 ರಿಂದ 24ರ ತನಕ ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಕಚೇರಿ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಹೇಳಿದ್ದಾರೆ.

ಹಲವು ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲಾವಣೆಹಲವು ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿಗಳು, ನಾಡ ಕಚೇರಿಗಳ ಸಿಬ್ಬಂದಿಗಳು ಹಾಗೂ ಇತರೆ ಎಲ್ಲ ಕಲಬುರಗಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ/ಸಿಬ್ಬಂದಿಯವರು ಮೊದಲಿನಂತೆ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ.

ದೇಶದಲ್ಲಿ ಅತಿ ಹೆಚ್ಚು ತಾಪಮಾನವಿರುವ ಪ್ರದೇಶಗಳೆಡೆಗೆ ಒಂದು ನೋಟದೇಶದಲ್ಲಿ ಅತಿ ಹೆಚ್ಚು ತಾಪಮಾನವಿರುವ ಪ್ರದೇಶಗಳೆಡೆಗೆ ಒಂದು ನೋಟ

Kalaburagi

ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ/ ನೌಕರರು ಚುನಾವಣಾ ಅಧಿಕಾರಿಗಳ ಆದೇಶದಂತೆ ಚುನಾವಣಾ ಕರ್ತವ್ಯಗಳನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಅದೇ ರೀತಿ ಲೋಕಸಭಾ ಚುನಾವಣೆ ಚುನಾವಣೆ ನಂತರ ಅಂದರೆ 2019ರ ಏಪ್ರಿಲ್ 25 ರಿಂದ ಮೇ 31 ರವರೆಗೆ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕೆಂದು ಎಂದು ಹೇಳಿದ್ದಾರೆ.

ಬೇಸಿಗೆ ವಿಮಾನ ವೇಳಾಪಟ್ಟಿ: ಕೆಐಎಯಿಂದ ಹೊಸ ಮಾರ್ಗಗಳಿಗೆ ವಿಮಾನಬೇಸಿಗೆ ವಿಮಾನ ವೇಳಾಪಟ್ಟಿ: ಕೆಐಎಯಿಂದ ಹೊಸ ಮಾರ್ಗಗಳಿಗೆ ವಿಮಾನ

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಸಮಯವನ್ನು 2019ರ ಏಪ್ರಿಲ್ 1 ರಿಂದ ಮೇ 31 ರವರೆಗೆ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿದೆ.

ಆದರೆ, ಲೋಕಸಭಾ ಚುನಾವಣಾ ಕಾರ್ಯದ ಹಿನ್ನೆಲೆಯಲ್ಲಿ ಈ ಬದಲಾವಣೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ, ಏಪ್ರಿಲ್ 1 ರಿಂದ ಬೆಳಗ್ಗೆ 10 ಗಂಟೆಗೆ ಕಚೇರಿಗಳು ತೆರೆಯಲಿವೆ.

English summary
No change in government office timings in Kalaburagi from April 1, 2019. Karnataka Government changed the office timings of North Karnataka from April 1 to May 31 due to summer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X