ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇ 23ರ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ : ಸಿದ್ದರಾಮಯ್ಯ

|
Google Oneindia Kannada News

Recommended Video

Lok Sabha Elections 2019:ಭವಿಷ್ಯ ನುಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ | Oneindia Kannada

ಕಲಬುರಗಿ, ಮೇ 12 : 'ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಚಿಂಚೋಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಮೇ 23ರ ದಿನ ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರವಾಗಲಿದೆಯೇ ಹೊರತು ರಾಜ್ಯಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ನೀಡುತ್ತಾರೆ: ಬಿಎಸ್ ವೈಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ನೀಡುತ್ತಾರೆ: ಬಿಎಸ್ ವೈ

'ದೇಶದಲ್ಲಿ ನರೇಂದ್ರ ಮೋದಿಯವರ ವಿರೋಧಿ ಅಲೆಯಿದೆ. ಕಳೆದ ಬಾರಿಯಂತೆ ಬಿಜೆಪಿಯನ್ನು ಒಳಗೊಂಡ ಎನ್‌ಡಿಎ ಕೂಟ ಸ್ಪಷ್ಟ ಬಹುಮತ ಪಡೆಯಲಾರದು. ಕಳೆದ ಬಾರಿ ಗೆದ್ದ ಸ್ಥಾನಗಳಲ್ಲಿ ಬಿಜೆಪಿ ಕನಿಷ್ಟ ನೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ' ಎಂದರು.

ಕುಂದಗೋಳ, ಚಿಂಚೋಳಿ ಚುನಾವಣೆ ಗೆಲ್ಲುತ್ತೇವೆ : ಯಡಿಯೂರಪ್ಪಕುಂದಗೋಳ, ಚಿಂಚೋಳಿ ಚುನಾವಣೆ ಗೆಲ್ಲುತ್ತೇವೆ : ಯಡಿಯೂರಪ್ಪ

No change in Karnataka politics after May 23 says Siddaramaiah

'ಬಿಜೆಪಿಯವರು ಕಸರತ್ತು ನಡೆಸಿ ಉಮೇಶ್ ಜಾಧವ್‌ ಅವರನ್ನು ಸೆಳೆದುಕೊಂಡಿರಬಹುದು. ಆದರೆ, ಉಳಿದ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ ಇವರೆಲ್ಲ ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂಬ ಭರವಸೆ ಇದೆ' ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯ 10 ಶಾಸಕರು ನಮ್ಮ ಜೊತೆ ಇದ್ದಾರೆ : ಜಮೀರ್ಬಿಜೆಪಿಯ 10 ಶಾಸಕರು ನಮ್ಮ ಜೊತೆ ಇದ್ದಾರೆ : ಜಮೀರ್

'ಕಾಂಗ್ರೆಸ್ ಪಕ್ಷದಲ್ಲಿ ಬಗೆಹರಿಸಲಾರದ ಯಾವುದೇ ಸಮಸ್ಯೆಗಳಿಲ್ಲ, ಎಲ್ಲವೂ ಸರಿಯಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.

ಮೇ 23ರ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಹಲವು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

English summary
Karnataka former Chief Minister Siddaramaiah said that, There is no change in Karnataka politics after May 23 Lok sabha elections result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X