ಐಜಿಪಿ ಅಲೋಕ್ ಕುಮಾರ್ ವರ್ಗಾವಣೆ, ಜನರ ಆಕ್ರೋಶ

Posted By: Gururaj
Subscribe to Oneindia Kannada

ಬೆಳಗಾವಿ, ಡಿಸೆಂಬರ್ 31 : ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಲೋಕ್ ಕುಮಾರ್ ರೌಡಿಗಳಿಗೆ ಸಿಂಹ ಸ್ವಪ್ನವಾಗಿದ್ದರು. ಕಲಬುರಗಿಯ ಟ್ರಾಫಿಕ್ ಸುಧಾರಣೆಗೆ ಪ್ರಯತ್ನ ನಡೆಸಿದ್ದರು. ಸ್ವತಃ ತಾವೇ ರಸ್ತೆಗಳಿದು ಸುಪ್ರೀಂಕೋರ್ಟನ ನಿಯಮದಂತೆ ಹೆಲ್ಮೆಟ್ ಕಡ್ಡಾಯಗೊಳಿಸಲು ಶ್ರಮಿಸಿದ್ದರು.

ದೇಶದ ಟಾಪ್ 10 ಕಾಪ್ ಗಳಲ್ಲಿ ಕನ್ನಡತಿ ಡಿ ರೂಪಾ

North-East Range IGP Alok Kumar transferred

ಅಲೋಕ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಈಶಾನ್ಯ ವಲಯ ವ್ಯಾಪ್ತಿಯಲ್ಲಿ ರೌಡಿಸಂ, ಕೊಲೆ, ಸುಲಿಗೆ, ದರೋಡೆ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿತ್ತು.

ಮುಂದಿನ ವರ್ಷ 27 ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು ನಿವೃತ್ತಿ

ಕಾನೂನು ಸುವ್ಯವಸ್ಥೆ ಕಾಪಾಡುವುದರ ಮೂಲಕ ಜನಜೀವನ ಹಸನುಗೊಳಿಸಲು ಶ್ರಮಿಸುತ್ತಿರುವ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಎಷ್ಟು ಸರಿ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಮುರುಗನ್ ಅವರನ್ನು ನೇಮಿಸಲಾಗಿದೆ. ಅಲೋಕ್ ಕುಮಾರ್ ಅವರನ್ನು ಬೆಳಗಾವಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
North-East Range Inspector-General of Police (IGP) Alok Kumar has been transferred. Alok Kumar posted to Belagavi division.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ