ವಿಮಾನ ನಿಲ್ದಾಣ: ಕಲಬುರಗಿಯ ಜನರಿಗೆ ಎಎಐನಿಂದ ಸಿಹಿಸುದ್ದಿ
ಕಲಬುರಗಿ, ಮೇ 18: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಕಲಬುರಗಿ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ. ನಗರದ ಸೇಡಂ ರಸ್ತೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣ ಇದ್ದು, 2022ರಲ್ಲಿ ಲೋಕಾರ್ಪಣೆಗೊಂಡಿದೆ.
ವಿಮಾನ ನಿಲ್ದಾಣಗಳ ಪ್ರಾಧಿಕಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇನ್‌ಸ್ಟ್ರುಮೆಂಟ್ ಲ್ಯಾಂಡಿಂಗ್ ಸ್ಟಿಸ್ಟಮ್ (ಐಎಲ್‌ಎಸ್) ಬಳಕೆಗೆ ಚಾಲನೆ ನೀಡಿದೆ. ಎಎಐ ಜಂಟಿ ಪ್ರಧಾನ ವ್ಯವಸ್ಥಾಪಕ (ಸಿಎನ್‌ಎಸ್) ಆರ್. ದಿವಾಕರ್ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.

ಸುಮಾರು 12.12 ಕೋಟಿ ರೂ. ವೆಚ್ಚ ಮಾಡಿ ಎಐಎ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈ ಸೌಲಭ್ಯವನ್ನು ಸ್ಥಾಪಿಸಿದೆ. ಇದರ ಮೂಲಕ ರಾತ್ರಿ ವಿಮಾನ ಲ್ಯಾಂಡ್ ಆಗಲು ಸಹಾಯಕವಾಗುವ ಜೊತೆಗೆ ಪ್ರತಿಕೂಲ ಹವಮಾನದಲ್ಲಿಯೂ ವಿಮಾನ ಸುಲಭವಾಗಿ ಭೂಸ್ಪರ್ಶ ಮಾಡಬಹುದಾಗಿದೆ.
ಆರ್. ದಿವಾಕರ್ ಐಎಲ್‌ಎಸ್ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿ, "ಇನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಹೆಚ್ಚಿನ ಅನುಕೂಲವಾಗಲಿದೆ. ಇದು ಈ ಭಾಗದ ಉತ್ತಮ ಸಂಪರ್ಕ ಮತ್ತು ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ" ಎಂದರು.
ಕಲಬುರಗಿ ವಿಮಾನ ನಿಲ್ದಾಣ: 2008ರಲ್ಲಿ ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ ಆರಂಭಗೊಂಡಿತ್ತು. ಆದರೆ ವಿವಿಧ ಕಾರಣಗಳಿಗೆ ಕಾಮಗಾರಿ ವಿಳಂಬಗೊಂಡಿತು. 742 ಎಕರೆ ಬೃಹತ್ ಪ್ರದೇಶದಲ್ಲಿ ಲಘು ವಿಮಾನಗಳು ಸೇರಿದಂತೆ ಏರ್‌ಬಸ್-320 ಸಹ ಲ್ಯಾಂಡ್ ಆಗಲು ಅನುಕೂಲವಾಗುವಂತೆ 3.725 ಕಿ. ಮೀ. ಉದ್ದದ ರನ್‍ವೇಯನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ.
2018ರಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಲಘು ವಿಮಾನದ ಪ್ರಾಯೋಗಿಕ ಹಾರಾಟ ಯಶಸ್ವಿಯಾಗಿತ್ತು. ಹೈದ್ರಾಬಾದ್‌ನ ಏಶಿಯನ್ ಪೆಸಿಫಿಕ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿಯ ಡೈಮಂಡ್-40 ಮತ್ತು ಡೈಮಂಡ್-42 ಎಂಬ 4 ಅಸನಗಳ ಎರಡು ಲಘು ವಿಮಾನಗಳು ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೂಲಕ ಕಲಬುರಗಿ ಜಿಲ್ಲೆಯ ಜನರ ವಿಮಾನ ಹಾರಾಟದ ಕನಸು ನನಸು ಮಾಡಿದ್ದವು.
2022ರ ನವೆಂಬರ್‌ನಲ್ಲಿ ಅಂದಿನ ಮುಖ್ಯಂತ್ರಿ ಬಿ. ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ್ದರು. ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ಸೇರ್ಪಡೆಗೊಂಡಿದೆ. ಆದರೆ ಪ್ರತಿಕೂಲ ಹವಾಮಾನ ಮತ್ತು ರಾತ್ರಿಯ ವೇಳೆ ವಿಮಾನ ಲ್ಯಾಂಡ್ ಮಾಡುವ ಸೌಲಭ್ಯ ವಿಮಾನ ನಿಲ್ದಾಣದಲ್ಲಿ ಲಭ್ಯವಿರಲಿಲ್ಲ.
ಐಎಲ್‌ಎಸ್ ಸೌಲಭ್ಯದ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಚಿಲಕಾ ಮಹೇಶ ಮಾಹಿತಿ ನೀಡಿದ್ದಾರೆ. "ರಡಾರ್ ಆಧಾರಿತ ಐಎಲ್‌ಎಸ್ ಉಪಕರಣವನ್ನು ರಷ್ಯಾದಿಂದ ತರಿಸಲಾಗಿದೆ. ತಡೆ ರಹಿತವಾದ ವಿಮಾನಗಳ ಹಾರಾಟಕ್ಕೆ ಈ ಸೌಲಭ್ಯ ಅನುಕೂಲವಾಗಲಿದೆ" ಎಂದರು.
"ಐಎಲ್‌ಎಸ್ ಉಪಕರಣದ ಸಹಾಯದಿಂದ ಮಂಜು ಕವಿದ ವಾತಾವರಣ, ಮಳೆ, ಕಡಿಮೆ ಬೆಳಕಿನಲ್ಲಿಯೂ ಪೈಲೆಟ್‌ಗಳಿಗೆ ನಿಖರವಾದ ತಾಂತ್ರಿಕ ನಿರ್ದೇಶನಗಳು ಸಿಗಲಿವೆ. ಇದರಿಂದಾಗಿ ಲ್ಯಾಂಡ್ ಮಾಡಲು ಅನುಕೂಲವಾಗಲಿದೆ" ಎಂದು ಹೇಳಿದರು.
"ಎಎಐ ಈ ಯೋಜನೆಗಾಗಿ 12.12 ಕೋಟಿ ರೂ. ವೆಚ್ಚ ಮಾಡಿದೆ. ಇದು ದೇಶಾದ್ಯಂತ ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಹಾರಾಟಕ್ಕೆ ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ಈ ವ್ಯವಸ್ಥೆಯಿಂದ ಪೈಲೆಟ್ 550 ಮೀಟರ್ ಎತ್ತರದಿಂದ ರನ್ ವೇಯನ್ನು ಸುಲಭವಾಗಿ ನೋಡಬಹುದು. ರನ್ ವೇ ಕೇಂದ್ರ ವಿದ್ಯುತ್ ಜಾಲವು ಸ್ಪಷ್ಟವಾದ ಹಾದಿ ತೋರಿಸಲಿದೆ" ಎಂದು ವಿವರಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕಲಬುರಗಿ ವಿಮಾನ ನಿಲ್ದಾಣ ಕೊಡುಗೆ ನೀಡುತ್ತಿದೆ. ದೇಶಕ್ಕೆ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತುಮೂಲಕ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಈಗ ರಾತ್ರಿಯೂ ಕಲಬುರಗಿಗೆ ವಿಮಾನ ಸಂಚಾರ ಆರಂಭಿಸಲು ಅನುಕೂಲವಾಗಿದ್ದು, ಇನ್ನಷ್ಟು ನಗರದಿಂದ ವಿಮಾನ ಸೇವೆ ಆರಂಭವಾಗುವ ನಿರೀಕ್ಷೆ ಇದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications