ಕಲಬುರಗಿಯಲ್ಲಿ ಕೊರೊನಾಗೆ ಮೂರನೇ ಬಲಿ

ಕಲಬುರಗಿ, ಏಪ್ರಿಲ್ 13: ಕೊರೊನಾ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ನಗರದ ಮೋಮಿನಪುರ ಬಡಾವಣೆಯ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾದಿಂದ ಮೂವರು ಮೃತಪಟ್ಟಿದ್ದಾರೆ. ಮೂರನೇ ಸಾವಿನಿಂದಾಗಿ ಜಿಲ್ಲೆಯಲ್ಲಿ ಆತಂಕವೂ ಹೆಚ್ಚಾಗಿದೆ.

ಇಂದು ಮೃತಪಟ್ಟಿರುವ ವ್ಯಕ್ತಿಯು ಬಟ್ಟೆ ವ್ಯಾಪಾರಿಯಾಗಿದ್ದು, ಇವರಿಗೆ ಏಪ್ರಿಲ್ 10ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕಲಬುರಗಿ ನಗರದ ಇಎಸ್ ‌ಐ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈತ ದೆಹಲಿಯ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿ ಬಂದಿದ್ದ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದಾಗಿ ತಿಳಿದುಬಂದಿದೆ.

ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಈ ವ್ಯಕ್ತಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದ್ದಾರೆ. ನಾಳೆ ನಸುಕಿನ ಜಾವ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಮೃತನ ಅಂತ್ಯಕ್ರಿಯೆ ನೆರವೇರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿರುವುದಾಗಿ ತಿಳಿಸಿದ್ದಾರೆ.

One More Death Reported In Kalaburagi Due To Coronavirus Today

ಕಲಬುರಗಿ ಜಿಲ್ಲೆಯಿಂದ ಒಟ್ಟು 26 ಜನ ದೆಹಲಿಯ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿ ಬಂದಿದ್ದರು. ಇದೀಗ ಮೃತ ವ್ಯಕ್ತಿಯ ಹಿನ್ನೆಲೆಯನ್ನು ಜಿಲ್ಲಾಡಳಿತ ಪರಿಶೀಲಿಸುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 13 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+