• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಲಬುರಗಿಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ: ವ್ಯಕ್ತಿಯ ಬಂಧನ

|

ಕಲಬುರಗಿ, ಮೇ 25: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಲಬುರಗಿಯ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಗ್ರಾಮದ ದಯಾನಂದ ಹಾಸು ಬಂಧಿತ ಆರೋಪಿಯಾಗಿದ್ದಾನೆ. ಸ್ಕಾರ್ಪಿಯೋ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕಲಬುರಗಿ-ಬೆಂಗಳೂರು ವಿಮಾನ ಸೇವೆ ಪುನರಾರಂಭಕಲಬುರಗಿ-ಬೆಂಗಳೂರು ವಿಮಾನ ಸೇವೆ ಪುನರಾರಂಭ

ಆಳಂದ ನಗರದ ಸ್ಟೇಷನ್ ಬಜಾರ್ ಏರಿಯಾದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತನಿಂದ 17 ಲೀಟರ್ ಲಿಕ್ಕರ್, 70 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ.

ಆಶ್ಚರ್ಯಕರ ಸಂಗತಿಯೆಂದರೆ ಆರೋಪಿ ಬಳಿ 0.32 ಎಂಎಂ ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳು ಪತ್ತೆಯಾಗಿವೆ. ಆರೋಪಿ ದಯಾನಂದ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿರುವ ಅಬಕಾರಿ ಅಧಿಕಾರಿಗಳು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

English summary
The man who smuggled liquor was arrested by the Excise Officers In Kalaburagi District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X