'ಒಂದು ವರ್ಷದಲ್ಲಿ ತುಮಕೂರು ಸೌರ ವಿದ್ಯುತ್ ಘಟಕ ಪೂರ್ಣ'

Posted By:
Subscribe to Oneindia Kannada

ಕಲಬುರಗಿ, ಸೆಪ್ಟೆಂಬರ್ 19 : 'ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸೌರ ವಿದ್ಯುತ್ ಉತ್ಪಾದನಾ ಘಟಕದ ನಿರ್ಮಾಣವನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುತ್ತದೆ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕಲಬುರಗಿಯಲ್ಲಿ ಭಾನುವಾರ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ಪಾವಗಡ ತಾಲೂಕಿನ 12 ಸಾವಿರ ಎಕರೆ ಪ್ರದೇಶದಲ್ಲಿ ಸೌರ ವಿದ್ಯುತ್ ಪಾರ್ಕ್ ಒಂದು ವರ್ಷದೊಳಗಾಗಿ ಪೂರ್ಣಗೊಂಡು ವಿದ್ಯುತ್ ಉತ್ಪಾದನಾ ಕಾರ್ಯ ಪ್ರಾರಂಭಿಸಲಿದೆ' ಎಂದರು.[ಕಾವೇರಿ ನದಿ ಕಾಲುವೆಗಳ ಮೇಲೆ ಸೌರ ಫಲಕ ಸ್ಥಾಪನೆ]

Pavagada solar project to be finished in one year says DK Shivakumar

'ರಾಜ್ಯದಲ್ಲಿ 2020ನೇ ಇಸವಿಯೊಳಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದ ಒಟ್ಟು 6000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ' ಎಂದು ತಿಳಿಸಿದರು.[ತುಮಕೂರು : ಸೋಲಾರ್ ಪಾರ್ಕ್ ಬಗ್ಗೆ ರೈತರೊಂದಿಗೆ ಮಾತುಕತೆ]

ಲೋಡ್ ಶೆಡ್ಡಿಂಗ್ ಇಲ್ಲ : 'ರಾಜ್ಯದಲ್ಲಿ ಕಳೆದ ವರ್ಷ ಬರಗಾಲವಿದ್ದರೂ ವಿದ್ಯುತ್ ಸಮಸ್ಯೆಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ರಾಜ್ಯದ ಜಲಾಶಯಗಳಲ್ಲಿ ಈಗ ಶೇ. 45 ರಷ್ಟು ನೀರಿದೆ. ಬಳ್ಳಾರಿಯ ಉಷ್ಣ ವಿದ್ಯುತ್ ಸ್ಥಾವರದ ಮೂರನೇ ಘಟಕ ಪ್ರಾರಂಭವಾಗಿದೆ' ಎಂದರು.[ಪಾವಗಡಕ್ಕೆ ಬಂತು ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್]

'ಮುಂದಿನ ಬರುವ 3-4 ವರ್ಷಗಳಲ್ಲಿ 5 ಸಾವಿರ ಮೆಗಾವಾಟ್ ಸೌರವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡಲಾಗುವುದಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Energy Minister D.K.Shivakumar said, Pavagada taluk 2000 MW solar park to be completed in a year.
Please Wait while comments are loading...