PM Modi Kalaburagi Event : ನರೇಂದ್ರ ಮೋದಿ ಕಲಬುರಗಿ ಭೇಟಿ ಕಾರ್ಯಕ್ರಮಗಳ ಪಟ್ಟಿ
ಕಲ್ಬುರ್ಗಿ, ಜನವರಿ 17: ಜನವರಿ 19ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಅವರು ಈ ವೇಳೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿವಹಿಸಲಿದ್ದು, ಅವರ ಕಾರ್ಯಕ್ರಮಗಳ ಪಟ್ಟಿ ಇಂತಿದೆ.
ಜನವರಿ 19ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ.
ಬೆಳಗ್ಗೆ 12ಕ್ಕೆ ಪ್ರಧಾನಿ ಮೋದಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧೂನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ 1 ಗಂಟೆಗೆ ಜಲ್ ಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್ ಚೆನ್ನೈ ಎಕ್ಸ್‌ಪ್ರೆಸ್ ವೇ ಪ್ಯಾಕೇಜ್ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ 1.10ಕ್ಕೆ ಕೊಡೆಕಲ್ ಹೆಲಿಪ್ಯಾಡ್‌ಗೆ ರಸ್ತೆ ಮೂಲಕ ಹೊರಡು ಹೆಲಿಪ್ಯಾಡ್ ಮೂಲಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಸಾಗಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಮಾಡಲಿದ್ದಾರೆ.

ಬಳಿಕ 2.15ಕ್ಕೆ ಮಳಖೇಡದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಂದಾಯ ಇಲಾಖೆಯ ಇತಿಹಾಸದಲ್ಲಿಯೇ ಏಕಕಾಲದಲ್ಲಿ ಕಲಬುರಗಿ ಸೇರಿದಂತೆ ರಾಯಚೂರು, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ.
ಬಳಿಕ ಅಲ್ಲಿಂದ ರಸ್ತೆ ಮೂಲಕ 3.05ಕ್ಕೆ ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಬಳಿಕ 3.30ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ನಂತರ 3.35ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈಗಾಗಲೇ ಕಂದಾಯ ಸಚಿವ ಆರ್. ಅಶೋಕ ವಿವಿಧ ಜಿಲ್ಲೆಗಳ ಫಲಾನುಭವಿಗಳ ಜೊತೆಗೆ ಮೋದಿ ಅಭಿಮಾನಿಗಳು ಸಹ ಆಗಮಿಸುವುದರಿಂದ ಬೃಹತ್ ಜರ್ಮನ್ ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿ ಸ್ಥಳ ಪರೀಶಿಲನೆಯನ್ನು ನಡೆದಿದ್ದಾರೆ.












Click it and Unblock the Notifications