ರಾಹುಲ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಬಿಜೆಪಿಗರ ಬಂಧನ

By: ಕಲಬುರಗಿ ಪ್ರತಿನಿಧಿ
Subscribe to Oneindia Kannada

ಜೇವರ್ಗಿ, ಫೆಬ್ರವರಿ 12: ರಾಜ್ಯಕ್ಕೆ ಬಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ಮುಂದಾದ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.೦

ಜೇವರ್ಗಿಯಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಹುಲ್ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ಮಾಡಲು ಜೇವರ್ಗಿ ಬಳಿಯ ಕೆಲ್ಲೂರು ಬಳಿ ಬಿಜೆಪಿ ಕಾರ್ಯಕರ್ತರು ಕಾಯುತ್ತಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡದೆ ಬಿಜೆಪಿ ಕಾರ್ಯಕರನ್ನು ಬಂಧಿಸಿದ್ದಾರೆ.

ತೊಗರಿ ಖರೀದಿ ಕೆಂದ್ರ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್, ಧರ್ಮಣ್ಣ ದೊಡ್ಡಮನಿ ಅವರ ಮುಂದಾಳತ್ವದಲ್ಲಿ ನೂರಾರು ಜನ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಜ್ಜಾಗಿದ್ದರು.

Police arrested BJP members who are trying to protest against Rahul Gandhi

ಪೊಲೀಸರು ಬಂಧಿಸಿದ ವೇಳೆ ಪ್ರತಿರೋಧ ತೋರಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಹಾಗೂ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Police arrested some BJP members who were trying to show black flag to Rahul Gandhi who is coming to Jevargi for participate in the rally.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ