ಪಿಂಚಣಿ ಪಡೆಯುವ ನಿವೃತ್ತ ನೌಕರರಿಗೆ ಸಿಹಿ ಸುದ್ದಿ
ಕಲಬುರಗಿ, ನವೆಂಬರ್ 04: ನಿವೃತ್ತ ಸರ್ಕಾರಿ ನೌಕರರು ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಂಚೆ ಇಲಾಖೆ ಮುಂದಾಗಿದೆ. ಪಿಂಚಣಿ ಪಡೆಯುವ ನಿವೃತ್ತ ನೌಕರರು ಪ್ರತಿ ವರ್ಷ ಜೀವಂತ ಪ್ರಮಾಣ ಪತ್ರ ಸಲ್ಲಿಸಬೇಕಾಗಿದೆ.
ನಿವೃತ್ತ ಸರ್ಕಾರಿ ನೌಕರರು ಪ್ರತಿ ವರ್ಷ ಜೀವನ ಪ್ರಮಾಣಪತ್ರ ಸಲ್ಲಿಸಲು ಕಚೇರಿಗಳಿಗೆ ಅಲೆದಾಡಬೇಕಾಗಿದೆ. ಕೋವಿಡ್ ಸಂದರ್ಭದಲ್ಲಿ ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಇನ್ನು ಮುಂದೆ ಮನೆ ಬಾಗಿಲಿನಲ್ಲಿಯೇ ಜೀವಂತ ಪ್ರಮಾಣಪತ್ರ ಸಲ್ಲಿಸಬಹುದು.
ಮನೆ ಬಾಲಿಲಿಗೆ ಟಪಾಲು ತಲುಪಿಸುವ ಪೋಸ್ಟ್ ಮ್ಯಾನ್ ನಿವೃತ್ತ ಸರ್ಕಾರಿ ನೌಕರರ ಫೋಟೋ ಹಾಗೂ ಬೆರಳಚ್ಚನ್ನು ಪಡೆಯುವ ಮೂಲಕ ಜೀವಂತ ಪ್ರಮಾಣಪತ್ರವನ್ನು ಪಡೆದುಕೊಳ್ಳಲಿದ್ದಾರೆ. ಇದರಿಂದ ನಿವೃತ್ತ ನೌಕರರಿಗೆ ಸಹಾಯಕವಾಗಿದೆ.

ಕಲಬುರಗಿ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕರಾದ ಬಿ. ಆರ್. ನನಜಗಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಈ ಸೌಲಭ್ಯ ದೊರೆಯಲಿದ್ದು, ಎಲ್ಲಾ ನಿವೃತ್ತ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಕರೆ ನೀಡಿದ್ದಾರೆ.
ನಿವೃತ್ತ ಸರ್ಕಾರಿ ನೌಕರರ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08472-263800ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.












Click it and Unblock the Notifications