ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಂಚಣಿ ಪಡೆಯುವ ನಿವೃತ್ತ ನೌಕರರಿಗೆ ಸಿಹಿ ಸುದ್ದಿ

|
Google Oneindia Kannada News

ಕಲಬುರಗಿ, ನವೆಂಬರ್ 04: ನಿವೃತ್ತ ಸರ್ಕಾರಿ ನೌಕರರು ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಂಚೆ ಇಲಾಖೆ ಮುಂದಾಗಿದೆ. ಪಿಂಚಣಿ ಪಡೆಯುವ ನಿವೃತ್ತ ನೌಕರರು ಪ್ರತಿ ವರ್ಷ ಜೀವಂತ ಪ್ರಮಾಣ ಪತ್ರ ಸಲ್ಲಿಸಬೇಕಾಗಿದೆ.

ನಿವೃತ್ತ ಸರ್ಕಾರಿ ನೌಕರರು ಪ್ರತಿ ವರ್ಷ ಜೀವನ ಪ್ರಮಾಣಪತ್ರ ಸಲ್ಲಿಸಲು ಕಚೇರಿಗಳಿಗೆ ಅಲೆದಾಡಬೇಕಾಗಿದೆ. ಕೋವಿಡ್ ಸಂದರ್ಭದಲ್ಲಿ ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಇನ್ನು ಮುಂದೆ ಮನೆ ಬಾಗಿಲಿನಲ್ಲಿಯೇ ಜೀವಂತ ಪ್ರಮಾಣಪತ್ರ ಸಲ್ಲಿಸಬಹುದು.

ಪಿಂಚಣಿ; ಜೀವಂತ ಪ್ರಮಾಣ ಪತ್ರ ಸಲ್ಲಿಕೆ ಬದಲಾವಣೆ ಪಿಂಚಣಿ; ಜೀವಂತ ಪ್ರಮಾಣ ಪತ್ರ ಸಲ್ಲಿಕೆ ಬದಲಾವಣೆ

ಮನೆ ಬಾಲಿಲಿಗೆ ಟಪಾಲು ತಲುಪಿಸುವ ಪೋಸ್ಟ್ ಮ್ಯಾನ್ ನಿವೃತ್ತ ಸರ್ಕಾರಿ ನೌಕರರ ಫೋಟೋ ಹಾಗೂ ಬೆರಳಚ್ಚನ್ನು ಪಡೆಯುವ ಮೂಲಕ ಜೀವಂತ ಪ್ರಮಾಣಪತ್ರವನ್ನು ಪಡೆದುಕೊಳ್ಳಲಿದ್ದಾರೆ. ಇದರಿಂದ ನಿವೃತ್ತ ನೌಕರರಿಗೆ ಸಹಾಯಕವಾಗಿದೆ.

ಪಿಂಚಣಿ ಹಣಕ್ಕೆ ಕಿತ್ತಾಟ: ಪತ್ನಿಯನ್ನು ಕೊಂದ 92ರ ವೃದ್ಧಪಿಂಚಣಿ ಹಣಕ್ಕೆ ಕಿತ್ತಾಟ: ಪತ್ನಿಯನ್ನು ಕೊಂದ 92ರ ವೃದ್ಧ

Postman Will Collect Life Certificate

ಕಲಬುರಗಿ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕರಾದ ಬಿ. ಆರ್. ನನಜಗಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಈ ಸೌಲಭ್ಯ ದೊರೆಯಲಿದ್ದು, ಎಲ್ಲಾ ನಿವೃತ್ತ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಕರೆ ನೀಡಿದ್ದಾರೆ.

ಪಿಂಚಣಿ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ: ಅಶೋಕ ಪಿಂಚಣಿ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ: ಅಶೋಕ

ನಿವೃತ್ತ ಸರ್ಕಾರಿ ನೌಕರರ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08472-263800ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

English summary
Now postman will collect life certificate from government pensioners. It is mandatory for pensioners to submit the life certificate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X