• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆಗೆ ಕೋವಿಡ್ ಸೋಂಕು

|

ಕಲಬುರಗಿ, ಸೆಪ್ಟೆಂಬರ್ 20 : ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಗೆ ಕೋವಿಡ್ ಸೋಂಕು ತಗುಲಿದೆ. ಸೆಪ್ಟೆಂಬರ್ 21ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದೆ.

ಶನಿವಾರ ಪ್ರಿಯಾಂಕ್ ಖರ್ಗೆ ಅವರು ಕೋವಿಡ್ ಸೋಂಕು ತಗುಲಿರುವ ಕುರಿತು ಟ್ವೀಟ್ ಮಾಡಿದ್ದಾರೆ. "ನನಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ" ಎಂದು ಹೇಳಿದ್ದಾರೆ.

ಗುಡ್‌ನ್ಯೂಸ್: ಭಾರತವು ಕೋವಿಡ್ ಗುಣಮುಖ ಸಂಖ್ಯೆಯಲ್ಲಿ ಅಮೆರಿಕಾವನ್ನೇ ಹಿಂದಿಕ್ಕಿದೆ

"ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ. ಸುರಕ್ಷಿತವಾಗಿರಿ" ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್ ಪಾಸಿಟಿವ್

ಸೆಪ್ಟೆಂಬರ್ 21ರಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತಿದೆ. ಆದ್ದರಿಂದ, ಎಲ್ಲಾ ಶಾಸಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಶನಿವಾರ ಪ್ರಿಯಾಂಕ್ ಖರ್ಗೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು

ಶನಿವಾರದ ವರದಿ ಪ್ರಕಾರ ಕರ್ನಾಟಕದಲ್ಲಿ 8,364 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 51,13,46. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 98,564.

ಕಲಬುರಗಿ ಜಿಲ್ಲೆಯಲ್ಲಿ ಶನಿವಾರ 110 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,443. ಇದುವರೆಗೂ ಜಿಲ್ಲೆಯಲ್ಲಿ 257 ಜನರು ಮೃತಪಟ್ಟಿದ್ದಾರೆ.

English summary
Congress leader and Chittapur MLA Priyank Kharge tested positive for COVID 19. I have been tested positive for Covid 19, I have no symptoms former minister tweeted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X