Breaking; ಪಿಎಸ್‌ಐ ನೇಮಕಾತಿ ಹಗರಣ, 11 ಪೊಲೀಸ್ ಸಿಬ್ಬಂದಿ ಅಮಾನತು

ಕಲಬುರಗಿ, ಮೇ 07; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮುಂದುವರೆದಿದೆ. ಹಗರಣ ಮೊದಲು ಬೆಳಕಿಗೆ ಬಂದಿದ್ದು ಕಲಬುರಗಿ ಜಿಲ್ಲೆಯಲ್ಲಿ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೂ ಈಗ ಸಂಕಷ್ಟ ಎದುರಾಗಿದೆ.

ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳ 11 ಸಿಬ್ಬಂದಿಗಳನ್ನು ಶನಿವಾರ ಅಮಾನತು ಮಾಡಲಾಗಿದೆ. ಅಮಾನತುಗೊಂಡ ಸಿಬ್ಬಂದಿಗಳು ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ನಡೆದ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದರು.

ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾತನುಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಸಿಐಡಿ ತನಿಖೆ ಚುರುಕುಗೊಂಡಿದೆ.

PSI Recruitment Scam 11 Police Officials Suspended

ಇನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವೈಜನಾಥ್‌ ಎಂಬುವವರನ್ನು ಬಂಧಿಸಿದೆ. ಕೆಎಸ್ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಪ್ರಕರಣದ ಕಿಂಗ್‌ಪಿನ್ ಆರ್. ಡಿ. ಪಾಟೀಲ್ ಸಂಪರ್ಕದಲ್ಲಿದ್ದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಸ್ತುವಾರಿಯಾಗಿದ್ದರು.

ವೈಜನಾಥ್ ಬಂಧನದಿಂದಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕೇಂದ್ರದಲ್ಲಿಯೂ ಅಕ್ರಮ ನಡೆದಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಶುಕ್ರವಾರ ರಾತ್ರಿ ವೈಜನಾಥ್ ವಶಕ್ಕೆ ಪಡೆದಿದ್ದ ಸಿಐಡಿ ಅಧಿಕಾರಿಗಳು ವಿಚಾರಣೆ ಬಳಿಕ ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+