ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಎಸ್‌ಐ ನೇಮಕಾತಿ ಹಗರಣ; ಫಸ್ಟ್‌ ರ‍್ಯಾಂಕ್ ರಚನಾ ಬಂಧನ!

|
Google Oneindia Kannada News

ಕಲಬುರಗಿ, ಆಗಸ್ಟ್ 28; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ರಚನಾ ಹನುಮಂತ್ ಬಂಧಿಸಿದ್ದಾರೆ. ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ರಚನಾ ಮೇಲೆ ಓಎಂಆರ್ ಶೀಟ್ ತಿದ್ದಿದ ಆರೋಪವಿದೆ.

25 ವರ್ಷದ ರಚನಾ ಹನುಮಂತ್ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ನಿವಾಸಿ. ಮೂರುವರೆ ತಿಂಗಳಿನಿಂದ ರಚನಾ ತಲೆಮರೆಸಿಕೊಂಡಿದ್ದಳು. ಪಿಎಸ್ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬಳಿಕ ಪರಾರಿಯಾಗಿದ್ದ ರಚನಾಗೆ ಹುಡುಕಾಟ ನಡೆದಿತ್ತು.

ಪಿಎಸ್‌ಐ ಹಗರಣದ ರೂವಾರಿ ದಿವ್ಯಾ ಹಾಗರಗಿ ಸಲ್ಲಿಸಿದ್ದ ಪಿಐಎಲ್ ವಜಾ ಪಿಎಸ್‌ಐ ಹಗರಣದ ರೂವಾರಿ ದಿವ್ಯಾ ಹಾಗರಗಿ ಸಲ್ಲಿಸಿದ್ದ ಪಿಐಎಲ್ ವಜಾ

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಆಳಂದ ತಾಲೂಕಿನ ಹಿರೋಳ್ಳಿ ಕ್ರಾಸ್ ಬಳಿ ರಚನಾ ಇರುವ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ಆಕೆಯನ್ನು ಬಂಧಿಸಿದ್ದಾರೆ. ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಿಎಸ್‌ಐ ನೇಮಕ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾಪಿಎಸ್‌ಐ ನೇಮಕ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

PSI Recruitment Scam 1st Rank Rachana Arrested By CID

ರಚನಾರನ್ನು ಕಲಬುರಗಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ಎಫ್‌ಐಆರ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಆದ ಕಾರಣ ಹೆಚ್ಚಿನ ವಿಚಾರಣೆಗಾಗಿ ಕರೆದುಕೊಂಡು ಬರಲಾಗಿದೆ.

ಪಿಎಸ್‌ಐ ನೇಮಕ ಹಗರಣದ ಆರೋಪಿಗಳು ಜಾಮೀನಿಗೆ ಅರ್ಹರಲ್ಲ! ಪಿಎಸ್‌ಐ ನೇಮಕ ಹಗರಣದ ಆರೋಪಿಗಳು ಜಾಮೀನಿಗೆ ಅರ್ಹರಲ್ಲ!

17ನೇ ಆರೋಪಿ; 545 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪವಿದೆ. ರಚನಾ ಹನುಮಂತ್ ಈ ಪ್ರಕರಣದಲ್ಲಿ 17ನೇ ಆರೋಪಿ.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಚನಾ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಆದರೆ ಈಕೆಯ ವಿರುದ್ಧ ಒಎಂಆರ್ ಶೀಟ್ ತಿದ್ದಿದ ಆರೋಪವಿದೆ. ತನ್ನ ವಿರುದ್ಧ ಎಫ್‌ಐಆರ್ ದಾಖಲಾದ ಬಳಿಕ ರಚನಾ ತಲೆಮರೆಸಿಕೊಂಡಿದ್ದಳು.

ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ರೂ. ಹಣ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಸಿಐಡಿ ಡಿವೈಎಸ್‌ಪಿ ನರಸಿಂಹಮೂರ್ತಿ 22 ಆರೋಪಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು.

psi recruitment

ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಆದ್ದರಿಂದ ಕಲಬುರಗಿ ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ರಚನಾ ಜೊತೆ ಇನ್ನು ಯಾರು ಸಂಪರ್ಕದಲ್ಲಿದ್ದರು? ಎಂಬುದು ವಿಚಾರಣೆ ಬಳಿಕ ತಿಳಿಯಲಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಳು; ಕರ್ನಾಟಕ ಸರ್ಕಾರ ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬಳಿಕ ಲಿಖಿತ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತು. ಆಗ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ರಚನಾ ಸಹ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಲಿಖಿತ ಪರೀಕ್ಷೆ ರದ್ದುಗೊಳಿಸಿದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.

ಎಫ್‌ಐಆರ್ ದಾಖಲಾದ ಬಳಿಕ ರಚನಾ ನಾಪತ್ತೆಯಾಗಿದ್ದಳು. ಪದೇ ಪದೇ ಮೊಬೈಲ್ ಬದಲಾಯಿಸುತ್ತಿದ್ದಳು. ಬೇರೆ ಬೇರೆ ಕಡೆಗೆ ವಾಸ್ತವ್ಯ ಬದಲಿಸುತ್ತಿದ್ದಳು. ಇದರಿಂದಾಗಿ ಆಕೆಯನ್ನು ಬಂಧಿಸುವುದು ಸವಾಲಾಗಿತ್ತು.

ಶುಕ್ರವಾರ ಸಿಐಡಿ ಪೊಲೀಸರಿಗೆ ರಚನಾ ಶನಿವಾರ ಆಳಂದ ತಾಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್‌ ಬಳಿ ಬರುತ್ತಾಳೆ ಎಂಬ ಮಾಹಿತಿ ಸಿಕ್ಕಿತ್ತು. ರಚನಾ ಬಂಧಿಸಲು ಸಿಐಡಿ ಪೊಲೀಸರ ತಂಡ ಯೋಜನೆ ರೂಪಿಸಿತ್ತು. ಇದರ ಅನ್ವಯ ಕಾರ್ಯಾಚರಣೆ ನಡೆಸಿ ರಚನಾ ಬಂಧಿಸಲಾಗಿದೆ.

ಪಿಎಸ್‌ಐ ನೇಮಕಾತಿ ಹಗರಣ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಲವಾರು ಆರೋಪಿಗಳು ಕಲಬುರಗಿ ಜಿಲ್ಲೆಗೆ ಸೇರಿದವರು, ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆದವರು.

ಎಲೆಕ್ಟ್ರಾನಿಕ್ ಬ್ಲೂಟುತ್ ಡಿವೈಸ್ ಬಳಿಸಿ ಪರೀಕ್ಷೆ ಬರೆದವರು ಹಲವರಿದ್ದಾರೆ. ಉಳಿದ ಆರೋಪಿಗಳು ಒಎಂಆರ್ ಶೀಟ್ ತಿದ್ದಲು ಹಣ ನೀಡಿದ್ದಾರೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಇದುವರೆಗೂ 50ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಸರ್ಕಾರಿ ನೌಕರರು ಸೇರಿದ್ದಾರೆ. ಹಗರಣ ನಡೆಯುವಾಗ ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸಹ ಬಂಧಿಸಲಾಗಿದೆ.

English summary
Karnataka CID police who probing police sub inspector (PSI) recruitment scam arrested Rachana Hanumath. 25 year old Rachana bagged 1st rank in the PSI recruitment exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X