ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ; ಪಿಎಸ್‌ಐ ನೇಮಕಾತಿ ಹಗರಣ, ಆರೋಪಿಗಳಿಗೆ ಜಾಮೀನು ಇಲ್ಲ

|
Google Oneindia Kannada News

ಕಲಬುರಗಿ, ಜೂ 16: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಶಾಂತಿಬಾಯಿ ಮತ್ತು ಆಕೆಯೆ ಪತಿ ಬಸ್ಯಾನಾಯಕ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ತನಿಖೆ ಪ್ರಾರಂಭವಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಇಬ್ಬರೂ ಕೆಲವು ದಿನಗಳ ಹಿಂದೆ ಸಿಕ್ಕಿಬಿದ್ದಿದ್ದರು.

ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾನಾಯಕನನ್ನು ಹೈದರಾಬಾದ್​ನಲ್ಲಿ ಪೊಲೀಸರು ಬಂಧಿಸಿದ್ದರು. ಆರೋಪಿ ದಂಪತಿ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 3 ನೇ ಜೆಎಂಎಫ್‌ಸಿ ನ್ಯಾಯಾಧೀಶ ಶ್ರೀನಿವಾಸ. ಕೆ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.

ಕಲಬುರಗಿ; ಜೂನ್ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಕಲಬುರಗಿ; ಜೂನ್ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಶಾಂತಿಬಾಯಿ ನೀರಾವರಿ ಇಲಾಖೆ ಇಂಜಿನಿಯರ್ ಮುಂಜುನಾಥ ಮೇಳಕುಂದಿ ಸಹಾಯದಿಂದ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್‌ಐ ಪರೀಕ್ಷೆ ಬರೆದು ಪಾಸಾಗಿದ್ದರು. ಅಕ್ರಮ ಹೊರಬರುತ್ತಿದಂತೆ ಪತಿ ಹಾಗೂ ಮಕ್ಕಳ ಜತೆ ತಲೆಮರೆಸಿಕೊಂಡಿದ್ದರು. ಹಣ ನೀಡಿ ಒಎಂಆರ್ ಶೀಟ್‌ನಲ್ಲಿ ನಕಲು ಮಾಡಿದ್ದಾರೆ ಎಂಬುದು ಆರೋಪ.

PSI Recruitment Scam Bail Of Two Accused Rejected

ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ಸಹಚರರ ಬಂಧನ; ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಿಂಗ್‌ಪಿನ್ ರುದ್ರಗೌಡ ಪಾಟೀಲನ ಮತ್ತಿಬ್ಬರು ಸಹಚರರನ್ನು ಶುಕ್ರವಾರ ಬಂಧಿಸಿದ್ದಾರೆ.

ಯಾವ ಕಾನೂನಿನಡಿ ರಾಹುಲ್ ಬಂಧಿಸುತ್ತಾರೆ?; ಪ್ರಿಯಾಂಕ್ ಖರ್ಗೆಯಾವ ಕಾನೂನಿನಡಿ ರಾಹುಲ್ ಬಂಧಿಸುತ್ತಾರೆ?; ಪ್ರಿಯಾಂಕ್ ಖರ್ಗೆ

ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ಮಹೇಶ್ ಹಿರೋಹಳ್ಳಿ, ಸೈಫನ್ ಜಮಾದಾರ್ ಬಂಧಿತರು. ಬಂಧಿತ ಸೈಫನ್ ಸಹೋದರ ಇಸ್ಮಾಯಿಲ್ ಖಾದರ್ ವಿರುದ್ಧ ಕೂಡ ಎಫ್ಐಆರ್ ದಾಖಲಾಗಿದೆ. ಈತ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪವಿದೆ.

PSI Recruitment Scam Bail Of Two Accused Rejected

Recommended Video

ಐರ್ಲೆಂಡ್ ವಿರುದ್ಧದ ಸರಣಿಗೆ ಸೆಲೆಕ್ಟ್ ಆಗಿಲ್ಲ ಅಂತ ರಾಹುಲ್ ತೆವಾಟಿಯಾ ಮಾಡಿದ್ದೇನು?|*Cricket | OneIndia Kannada

ಈತನ ಸಹೋದರ ಸೈಫನ್ ಜಮಾದಾರ್ ಸಹೋದರನ ಅಕ್ರಮಕ್ಕೆ ಸಹಕಾರ ನೀಡಿದ್ದ. ಬಂಧಿತ ಮಹೇಶ್ ಹಿರೋಹಳ್ಳಿ ಸಹ ಅಕ್ರಮದಲ್ಲಿ ಶಾಮೀಲಾಗಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಮಹೇಶ್ ಮತ್ತು ಸೈಫನ್ ಇಬ್ಬರೂ ಸಹ ಆರ್ ಡಿ ಪಾಟೀಲ್ ಪರಮಾಪ್ತರು. ಅಕ್ರಮದಲ್ಲಿ ಭಾಗಿಯಾಗಿದ್ದ ಇಸ್ಮಾಯಿಲ್ ಖಾದರ್ ತಲೆಮರೆಸಿಕೊಂಡಿದ್ದಾನೆ. ಸಿಐಡಿ ಹುಡುಕಾಟ ನಡೆಸುತ್ತಿದೆ.

English summary
PSI Recruitment Scam; Bail application of accused Shantabai, Basya nayak rejected by Kalaburagi district court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X