• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಲಬುರಗಿ; ಮಳೆ, ಪ್ರವಾಹ, ಸಹಾಯವಾಣಿ ಸಂಖ್ಯೆಗಳು

|

ಕಲಬುರಗಿ, ಅಕ್ಟೋಬರ್ 15 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಅಕ್ಟೋಬರ್ 16ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜನರಿಗೆ ಎಚ್ಚರಿಕೆ ನೀಡಿದೆ. ನದಿ ದಂಡೆಯಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: ಪ್ರವಾಹದಲ್ಲಿ ಸಿಲುಕಿರುವ ಕಾರ್ಮಿಕರು

ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ಸಹ ಹೆಚ್ಚಿನ ಮಳೆ ಆಗುವ ಸಂಭವವಿದೆ. ಭೀಮಾ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ, ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಾಗಲಿದೆ.

ಕಲಬುರಗಿ, ಬೀದರ್‌ನಲ್ಲಿ ಧಾರಾಕಾರ ಮಳೆ; ವ್ಯಕ್ತಿ ಸಾವು

ಜಲಾಶಯ ಮತ್ತು ಜಲಾಶಯ ಕಾಲುವೆಗಳ ದಂಡೆಯಲ್ಲಿ ಬರುವ ಗ್ರಾಮಗಳ ಗ್ರಾಮಸ್ಥರು ನದಿಯ ದಂಡೆಗೆ ಹೋಗದಂತೆ ಹಾಗೂ ನದಿ ದಂಡೆಯಲ್ಲಿ ಬಟ್ಟೆ ಒಗೆಯುವುದು, ವಾಹನ ತೊಳೆಯುವುದು, ಮಕ್ಕಳು ಈಜಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಗಾಳಿ ಸಹಿತ ಧಾರಾಕಾರ ಮಳೆ

ಮಳೆ, ಪ್ರವಾಹದ ಸಂಕಷ್ಟದ ಸಮಯದಲ್ಲಿ ಯಾವುದೇ ತುರ್ತು ಸಹಾಯಕ್ಕಾಗಿ ಜನರು ಕರೆ ಮಾಡಲು ಕಲಬುರಗಿ ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪನೆ ಮಾಡಿದೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ 1077, ದೂರವಾಣಿ ಸಂಖ್ಯೆಗಳು 08472-278677, 9448557713 ಹಾಗೂ 8951222125.

English summary
Kalaburagi witnessed for heavy rain and flood due to cyclone in bay of Bengal. District administration launched helpline numbers for the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X