ಕಲಬುರಗಿಯ ಸಿಯುಕೆ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕಲಬುರಗಿ, ಜನವರಿ 11 : ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ವಿದ್ಯಾರ್ಥಿನಿ ವಿವಿ ಆವರಣದಲ್ಲಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.

ಡಿಸೆಂಬರ್ 30ರಂದು ಸಂಜೆ 7.30ಕ್ಕೆ ಈ ಘಟನೆ ನಡೆದಿದೆ. ಈ ಸಂಬಂಧ ಹಾಸ್ಟೆಲ್ ಅಡುಗೆ ಕೆಲಸ ಮಾಡುವ ಅನಿಲ್ ಮತ್ತು ಗುರು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

Rape on 4th semester student in CUK campus

ಅಡುಗೆ ತಯಾರಾಗಿದೆಯೇ? ಎಂದು ಕೇಳಲು ವಿದ್ಯಾರ್ಥಿನಿ ಮೆಸ್‌ಗೆ ಹೋಗಿದ್ದಳು. ಆಗ ಅಲ್ಲಿದ್ದ ಅನಿಲ್ ಅಡುಗೆ ವಿಳಂಬವಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿನಿ ಜೊತೆ ಮಾತನಾಡುತ್ತಾ ಅನಿಲ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ವಿದ್ಯಾರ್ಥಿನಿ ಅನಿಲ್‌ರನ್ನು ದೂರತಳ್ಳಿ ಹೊರಬಂದಿದ್ದಾಳೆ. ಹೊರಗೆ ನಿಂತಿದ್ದ ಕೆಲಸಗಾರ ಗುರು ವಿದ್ಯಾರ್ಥಿನಿಯನ್ನು ಹಾಸ್ಟೆಲ್ ತನಕ ಬಿಟ್ಟು ಬರುವುದಾಗಿ ನಂಬಿಸಿ ಕರೆದುಕೊಂಡು ಹೋಗಿದ್ದ. ದಾರಿ ನಡುವೆ ಯಾರೂ ಇಲ್ಲದ್ದನ್ನು ಗಮನಿಸಿ ರಸ್ತೆ ಪಕ್ಕಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮಹೇಶ್ವರಯ್ಯ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ಅತ್ಯಾಚಾರ ಘಟನೆ ತಿಳಿದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ವಿದ್ಯಾರ್ಥಿನಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ' ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+