Ration card: ಪಡಿತರ ಚೀಟಿ ತಿದ್ದುಪಡಿಗೆ ಇಂದೇ ಕೊನೆ ದಿನ, ಪ್ರಮುಖ ಮಾಹಿತಿಯನ್ನು ಇಲ್ಲಿ ಗಮನಿಸಿ

ಬೆಂಗಳೂರು, ನವೆಂಬರ್‌, 30: ಪಡಿತರ ಸರಿಯಾಗಿ ಸಿಗಬೇಕೆಂದರೆ ಪಡಿತರ ಚೀಟಿಯಲ್ಲಿ ಯಾವುದೇ ಲೋಪಗಳು ಇರಬಾರದು. ಒಂದು ವೇಳೆ ಅಂತಹ ಲೋಪಗಳು ಇದ್ದಲ್ಲಿ ತಿದ್ದಪಡಿಗೆ ಮಾಡಿಸಲು ಇಂತಿಷ್ಟು ದಿನಗಳು ಅಂತಾ ಅವಕಾಶವನ್ನು ನೀಡಲಾಗುತ್ತದೆ. ಇನ್ನು ಈ ಜಿಲ್ಲೆಯಲ್ಲಿ ಇಂದಿನವರೆಗೂ (ನವೆಂಬರ್‌ 30) ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಹಾಗಾದರೆ ಸಮಯಗಳ ವಿವರವನ್ನು ಇಲ್ಲಿ ಗಮನಿಸಿ.

ಬಡಜನರಿಗೆ ಯಾವುದೇ ತೊಂದರೆ ಆಗಬಾರದೆಂದು ಹೊಸ ರೇಷನ್‌ ಕಾರ್ಡ್‌ ಅಥವಾ ತಿದ್ದುಪಡಿ ಮಾಡಿಸಲು ಆಗಾಗ ಅವಕಾಶ ನೀಡಲಾಗುತ್ತಿದೆ. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇದು ನವೆಂಬರ್‌ 29ರಿಂದ ಪ್ರಾರಂಭವಾಗಿದ್ದು, ನವೆಂಬರ್‌ 30ರಂದು ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ.

Ration card: Today is the last day for ration card correction, know timing details

ಶೀಘ್ರದಲ್ಲಿಯೇ ಈ ಅವಕಾಶವನ್ನು ಇತರ ಜಿಲ್ಲೆಗಳಿಗೆ ನೀಡಲು ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಹೀಗಾಗಿ ಉಳಿದವರೂ ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಸಿದ್ಧರಾಗಿ. ಫಲಾನುಭವಿಗಳ ಜಿಎಸ್‌ಸಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅವಕಾಶ ನೀಡಿರುವುದರ ಜೊತೆಗೆ ಹೊಸ ಆದ್ಯತಾ ಪಡಿತರ ಚೀಟಿಗೂ ಅರ್ಜಿ ಸಲ್ಲಿಸಬಹುದು.

ಜಿಎಸ್‌ಸಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆ, ಹೊಸ ಪಡಿತರ ಕಾರ್ಡ್‌ ಪಡೆಯಲು ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ಗಳಲ್ಲಿ ಅವಕಾಶವನ್ನು ನೀಡಲಾಗಿದೆ.

ತಿದ್ದುಪಡಿಯ ಸಮಯದ ವಿವರ ತಿಳಿಯಿರಿ

ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.
ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್‌ 3ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ದಿನ ಮಾತ್ರ ಅವಕಾಶ ನೀಡಲಾಗಿದ್ದು, ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆದರೆ ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಅನುಮತಿ ನೀಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.

ತಿದ್ದುಪಡಿಗೆ ದಾಖಲೆಗಳೇನು ಏನೇನು ಬೇಕು?

ಹೊಸ ಸದಸ್ಯರ ಸೇರ್ಪಡೆ ಮಾಡಬೇಕಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು. 5 ವರ್ಷದ ಒಳಗಿನ ಮಕ್ಕಳನ್ನು ಸೇರ್ಪಡೆ ಮಾಡಬೇಕಾದರೆ ಮನೆಯ ಹಿರಿಯ ಸದಸ್ಯರ ಆಧಾರ್‌ ಕಾರ್ಡ್ ಜೊತೆಗೆ ಆ ಮಗುವಿನ ಜನನ ಪ್ರಮಾಣ ಪತ್ರವನ್ನು ತೆಗೆದುಕೊಂಡು ಹೋಗಬೇಕು. ಹೆಸರು ತಿದ್ದುಪಡಿಗೆ ಆಧಾರ್‌ಕಾರ್ಡ್‌ ಅಥವಾ ಇತರೆ ಅಧಿಕೃತ ಗುರುತಿನ ಚೀಟಿಯನ್ನು ನೀಡಬೇಕು.

ಹೊಸ ಪಡಿತರ ಚೀಟಿಗೆ ಬೇಕಾದ ದಾಖಲಾತಿಗಳು

1. ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
2. ಮನೆಯ ವಿದ್ಯುತ್ ಬಿಲ್‌
3. ನಿವಾಸದ ಪೂರ್ಣ ವಿಳಾಸ
4. ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ಮನೆ ವಿಳಾಸದ ಹತ್ತಿರದ ಸ್ಥಳದ ಗುರುತು.
5. ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
6. ಮೊಬೈಲ್ ಸಂಖ್ಯೆ
7. ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ. ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+