ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಖರ್ಗೆಯನ್ನು ಸಿಎಂ ಮಾಡಲಿ: ಬಿಎಸ್‌ವೈ

ಕಲಬುರಗಿ, ಮೇ 15: ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕು ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, 'ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಲಿ' ಎಂದು ಸವಾಲು ಹಾಕಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿವರ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲೆಸೆದರು.

ಒಂದು ವೇಳೆ ಖರ್ಗೆ ಅವರ ಬಗ್ಗೆ ಕಳಕಳಿ ಇದ್ದಿದ್ದೇ ಆದಲ್ಲಿ ಕುಮಾರಸ್ವಾಮಿಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಖರ್ಗೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ. ಇದಕ್ಕೆ ನಮ್ಮದೇನೂ ಆಕ್ಷೇಪವಿಲ್ಲ ಎಂದರು.

ಮುಂದಿನ ಮುಖ್ಯಮಂತ್ರಿ ನಾನೆ ಎನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡುವ ಸಲುವಾಗಿ, ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದು ಕುಮಾರಸ್ವಾಮಿ ಹೇಳಿದ್ದರು, ಈ ಹೇಳಿಕೆಯನ್ನು ಬಿಜೆಪಿಯು ಸಮರ್ಥವಾಗಿ ಎಚ್‌ಡಿಕೆ ವಿರುದ್ಧವೇ ಬಳಸುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಮಲ್ಲಿಕಾರ್ಜುನ ಖರ್ಗೆ ಅವರು ಸಹ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ದಲಿತ ಸಿಎಂ ಎಂದು ಹೇಳಿ ಅವಮಾನ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲಿ ಖರ್ಗೆ, ದೇವೇಗೌಡಗೆ ಸೋಲು:ಬಿಎಸ್‌ವೈ

ಲೋಕಸಭೆಯಲ್ಲಿ ಖರ್ಗೆ, ದೇವೇಗೌಡಗೆ ಸೋಲು:ಬಿಎಸ್‌ವೈ

ಮುಂದುವರೆದು ಮಾತನಾಡಿರುವ ಯಡಿಯೂರಪ್ಪ ಅವರು, ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಕಾಂಗ್ರೆಸ್‌ನ ಬಹುತೇಕ ಎಲ್ಲಾ ಮುಖಂಡರು ಸೋಲನುಭವಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಚಿಂಚೋಳಿ ಕಡೆ ತಿರುಗಿಯೂ ನೋಡಿರಲಿಲ್ಲ ಸಿಎಂ: ಬಿಎಸ್‌ವೈ

ಚಿಂಚೋಳಿ ಕಡೆ ತಿರುಗಿಯೂ ನೋಡಿರಲಿಲ್ಲ ಸಿಎಂ: ಬಿಎಸ್‌ವೈ

ಚಿಂಚೋಳಿಯನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿಕೆ ಬಗ್ಗೆಯೂ ಕಿಡಿಕಾರಿದ ಯಡಿಯೂರಪ್ಪ, ಇಷ್ಟು ದಿನ ಚಿಂಚೋಳಿಯ ಕಡೆ ತಿರುಗಿಯೂ ನೋಡದ ಯಡಿಯೂರಪ್ಪ ಹಠಾತ್ತನೆ ಚಿಂಚೋಳಿಯನ್ನು ದತ್ತು ತೆಗೆದುಕೊಳ್ಳುವ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಖರ್ಗೆ ಅಸ್ತ್ರ ಪ್ರಯೋಗ

ಸಿದ್ದರಾಮಯ್ಯ ವಿರುದ್ಧ ಖರ್ಗೆ ಅಸ್ತ್ರ ಪ್ರಯೋಗ

ಕಾಂಗ್ರೆಸ್‌ನ ಹಲವು ಶಾಸಕರು ಮತ್ತು ಸ್ವತಃ ಸಿದ್ದರಾಮಯ್ಯ ಅವರೇ ಸಿಎಂ ಆಗುತ್ತೇನೆ ಎಂದು ಹೇಳಿಕೊಟ್ಟಿದ್ದು, ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಮುಖಂಡರಿಗೆ ಭಾರಿ ಆಕ್ರೋಶ ತಂದಿತ್ತು, ಇದರ ವಿರುದ್ಧ ಪ್ರತಿತಂತ್ರವಾಗಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಹೆಸರು ಎಳೆದು ತಂದರು, ಆದರೆ ಇದನ್ನು ಬಿಜೆಪಿಯವರು ಕುಮಾರಸ್ವಾಮಿ ವಿರುದ್ಧವೇ ಅಸ್ತ್ರವಾಗಿ ಬಳಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+