ನಾಗರಕೊಯಿಲ್- ಚೆನ್ನೈ ಎಕ್ಸ್‌‌ಪ್ರೆಸ್ ರೈಲಿನಲ್ಲಿ ದರೋಡೆ

Written By: Ramesh
Subscribe to Oneindia Kannada

ಕಲಬುರಗಿ, ಅಕ್ಟೋಬರ್, 05 : ನಾಗರಕೊಯಿಲ್- ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ನುಗ್ಗಿದ ದರೋಡೆಕೋರರ ಗುಂಪು ಹಣ ಮತ್ತು ಚಿನ್ನಾಭರಣವನ್ನು ದೋಚಿ ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಶಹಾಬಾದ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಮಂಗಳವಾರ ತಡರಾತ್ರಿ ರೈಲಿನ ಹಿಂದಿನ ಜನರಲ್ ಬೋಗಿಗೆ ನುಗ್ಗಿದ ದರೋಡೆಕೋರರು, 10ಕ್ಕೂ ಹೆಚ್ಚು ಪ್ರಯಾಣಿಕರ ಚಿನ್ನಾಭರಣ, ಹಣ ದೋಚಿದ್ದಾರೆ. ಹಣ ನೀಡಲು ನಿರಾಕರಿಸಿದ ಹಲವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ವಾಡಿ ಜಂಕ್ಷನ್‌ಗೆ ರೈಲು ಬರುತ್ತಿದ್ದಂತೆ ದರೋಡೆಕೋರರು ಇಳಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Train

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 15 ನಿಮಿಷ ರೈಲು ನಿಲ್ಲಿಸಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
robbed in Nagercoil-Chennai Express express train genral compartments on Tuesday night near kalaburagi district Shahabad railway station.
Please Wait while comments are loading...