ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್ ಉಲ್ಲಂಘಿಸಿದವರ ವಿರುದ್ಧ ರೌಡಿ ಶೀಟ್ ಓಪನ್!

|
Google Oneindia Kannada News

ಕಲಬುರಗಿ, ಏಪ್ರಿಲ್ 20: ಮಹಾಮಾರಿ ಕೊರನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಇಲ್ಲಿಯವರೆಗೆ ಲಾಕ್‍ ಡೌನ್ ಉಲ್ಲಂಘಿಸಿದ ಕಲಬುರಗಿ ಜಿಲ್ಲೆಯ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ತಿಳಿಸಿದ್ದಾರೆ.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್‍ ಡೌನ್ ಉಲ್ಲಂಘಿಸಿದವರ ವಿರುದ್ದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪಾದರಾಯನಪುರ ದಾಂಧಲೆ: ಪೊಲೀಸರಿಗೆ ಫ್ರೀ ಹ್ಯಾಂಡ್ ಘೋಷಿಸಿದ ಸಿಎಂಪಾದರಾಯನಪುರ ದಾಂಧಲೆ: ಪೊಲೀಸರಿಗೆ ಫ್ರೀ ಹ್ಯಾಂಡ್ ಘೋಷಿಸಿದ ಸಿಎಂ

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಜನರನ್ನು ವಶಕ್ಕೆ‌ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Rowdy Sheet Open Who Violate The Lockdow Rules In Kalaburagi

ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92700 ರೂ. ದಂಡ ಸಹ ವಿಧಿಸಲಾಗಿದೆ ಎಂದು ಎಸ್.ಪಿ. ಯಡಾ ಮಾರ್ಟಿನ್ ‌ಮಾರ್ಬನ್ಯಾಂಗ್ ತಿಳಿಸಿದ್ದಾರೆ.

English summary
Rowdy Sheet Case Open Against 118 people Who Violate The Lockdown Rules In Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X