30 ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ; MLC ಆಗಿ ಪ್ರೊ.ಸಾಬಣ್ಣ ತಳವಾರ್ ಆಯ್ಕೆ
ಕಲಬುರಗಿ, ಜುಲೈ 22: ರಾಜ್ಯ ವಿಧಾನ ಪರಿಷತ್‌ಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರು ಇಂದು ಆದೇಶ ಮಾಡಿದ್ದಾರೆ. ಕಲಾ ಕ್ಷೇತ್ರದಿಂದ ಸಿ.ಪಿ. ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ಎಚ್. ವಿಶ್ವನಾಥ್, ಸಮಾಜಸೇವೆ ಕ್ಷೇತ್ರದಿಂದ ಭಾರತಿ ಶೆಟ್ಟಿ, ವಿಶಿಷ್ಟ ಸೇವಾ ಕ್ಷೇತ್ರದಿಂದ ಶಾಂತಾರಾಮ ಸಿದ್ದಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಪ್ರೊ. ಸಾಬಣ್ಣ ತಳವಾರ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲಾಗಿದೆ.
Recommended Video
ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರೊ. ಸಾಬಣ್ಣ ತಳವಾರ್ ಅವರನ್ನು ಶಿಕ್ಷಣ ಕ್ಷೇತ್ರದಿಂದ ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಗೆ ನಾಮ ನಿರ್ದೇಶನಗೊಂಡಿರುವ ಡಾ. ತಳವಾರ್ ಸಾಬಣ್ಣನವರು ಕಲಬುರಗಿ ಜಿಲ್ಲೆಯ ಒಂದು ಸಣ್ಣ ಗ್ರಾಮದಿಂದ ಬಂದವರು. ಬಡತನ ಹಾಗೂ ಸಮಾಜದ ಮೇಲು ಕೀಳೆಂಬ ನೋವನ್ನು ಉಂಡು ಸಮಾಜಕ್ಕೆ ಕೊಡುಗೆ ನೀಡಿದವರು.

ಚಿನ್ನದ ಪದಕದೊಂದಿಗೆ ಅರ್ಥಶಾಸ್ತ್ರದಲ್ಲಿ ಪದವಿಯನ್ನು ಪಡೆದು ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಹಾಗೂ ಅಧ್ಯಾಪನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೇರ ನಡೆ ನುಡಿಯ ಸಾಬಣ್ಣನವರು ಕಳೆದ ಹಲವು ವರ್ಷಗಳಿಂದ ಸಾಮರಸ್ಯ, ಗತಿವಿಧಿಯ ಕಾರ್ಯಕರ್ತರಾಗಿ ಕಾರ್ಯ ಮಾಡುತ್ತಿದ್ದಾರೆ. ಪ್ರಸ್ತುತ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.












Click it and Unblock the Notifications