ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

30 ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ; MLC ಆಗಿ ಪ್ರೊ.ಸಾಬಣ್ಣ ತಳವಾರ್ ಆಯ್ಕೆ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಜುಲೈ 22: ರಾಜ್ಯ ವಿಧಾನ ಪರಿಷತ್‌ಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರು ಇಂದು ಆದೇಶ ಮಾಡಿದ್ದಾರೆ. ಕಲಾ ಕ್ಷೇತ್ರದಿಂದ ಸಿ.ಪಿ. ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ಎಚ್. ವಿಶ್ವನಾಥ್, ಸಮಾಜಸೇವೆ ಕ್ಷೇತ್ರದಿಂದ ಭಾರತಿ ಶೆಟ್ಟಿ, ವಿಶಿಷ್ಟ ಸೇವಾ ಕ್ಷೇತ್ರದಿಂದ ಶಾಂತಾರಾಮ ಸಿದ್ದಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಪ್ರೊ. ಸಾಬಣ್ಣ ತಳವಾರ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲಾಗಿದೆ.

Recommended Video

ಅಪ್ಪನ ಹಾದಿಯನ್ನೇ ಹಿಡಿದ ಮಗ | Oneindia Kannada

ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರೊ. ಸಾಬಣ್ಣ ತಳವಾರ್ ಅವರನ್ನು ಶಿಕ್ಷಣ ಕ್ಷೇತ್ರದಿಂದ ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್: ಎಚ್‌. ವಿಶ್ವನಾಥ್ ಸೇರಿ 4 ಸದಸ್ಯರ ನಾಮನಿರ್ದೇಶನವಿಧಾನ ಪರಿಷತ್: ಎಚ್‌. ವಿಶ್ವನಾಥ್ ಸೇರಿ 4 ಸದಸ್ಯರ ನಾಮನಿರ್ದೇಶನ

ವಿಧಾನ ಪರಿಷತ್ ಗೆ ನಾಮ ನಿರ್ದೇಶನಗೊಂಡಿರುವ ಡಾ. ತಳವಾರ್ ಸಾಬಣ್ಣನವರು ಕಲಬುರಗಿ ಜಿಲ್ಲೆಯ ಒಂದು ಸಣ್ಣ ಗ್ರಾಮದಿಂದ ಬಂದವರು. ಬಡತನ ಹಾಗೂ ಸಮಾಜದ ಮೇಲು ಕೀಳೆಂಬ ನೋವನ್ನು ಉಂಡು ಸಮಾಜಕ್ಕೆ ಕೊಡುಗೆ ನೀಡಿದವರು.

Sabanna Talawar Nominated For Legislative Council From Education Field

 ಸಿದ್ದಿ ಜನಾಂಗದ ಏಳಿಗೆಯ ಕೈ ಶಾಂತಾರಾಮ ಸಿದ್ದಿ ಸಿದ್ದಿ ಜನಾಂಗದ ಏಳಿಗೆಯ ಕೈ ಶಾಂತಾರಾಮ ಸಿದ್ದಿ

ಚಿನ್ನದ ಪದಕದೊಂದಿಗೆ ಅರ್ಥಶಾಸ್ತ್ರದಲ್ಲಿ ಪದವಿಯನ್ನು ಪಡೆದು ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಹಾಗೂ ಅಧ್ಯಾಪನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೇರ ನಡೆ ನುಡಿಯ ಸಾಬಣ್ಣನವರು ಕಳೆದ ಹಲವು ವರ್ಷಗಳಿಂದ ಸಾಮರಸ್ಯ, ಗತಿವಿಧಿಯ ಕಾರ್ಯಕರ್ತರಾಗಿ ಕಾರ್ಯ ಮಾಡುತ್ತಿದ್ದಾರೆ. ಪ್ರಸ್ತುತ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

English summary
Prof. Sabanna Talawar has been nominated for the legislative council from education field
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X