ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

ಕಲಬುರಗಿ, ಜುಲೈ.08 : ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಮುಖ್ಯಶಿಕ್ಷಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಲಬುರಗಿಯ ಬಾಪೂನಗರದ ಆದಿಜಾಂಬವ ಶಾಲೆಯ ಮುಖ್ಯ ಶಿಕ್ಷಕ ಮಲ್ಲನಗೌಡ (59) ಬಂಧಿತ ಆರೋಪಿ. ಮೊಮ್ಮಗಳ ವಯಸ್ಸಿನ ಏಳನೇ ತರಗತಿ ವಿದ್ಯಾರ್ಥಿನಿಗೆ ಮಲ್ಲನಗೌಡ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ.

"ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಕುರ್ಚಿಗಳನ್ನು ತೆಗೆದಿಡುವ ನೆಪ ಮಾಡಿಕೊಂಡು ನಮ್ಮ ಮಗಳನ್ನು ಶಾಲೆಯಲ್ಲೇ ಉಳಿಸಿಕೊಂಡಿದ್ದಾನೆ. ಆ ಬಳಿಕ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ" ಎಂದು ವಿದ್ಯಾರ್ಥಿನಿಯ ಪಾಲಕರು ದೂರು ದಾಖಲಿಸಿದ್ದಾರೆ.

School Headmaster was arrested on Saturday for sexually assaulting her student

ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಫೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿಕೊಂಡ ಬ್ರಹ್ಮಪುರ ಠಾಣೆ ಪೊಲೀಸರು ಮಲ್ಲನಗೌಡನನ್ನು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಉಮೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಲೈಂಗಿಕ ಮತ್ತು ಮಾನಸಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+