ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಕಂಟಕಕ್ಕೆ ಕಂಗಾಲಾದ ಕಲಬುರಗಿ: ಸೆಕ್ಷನ್ 144 ಜಾರಿ

|
Google Oneindia Kannada News

ಕಲಬುರಗಿ, ಮಾರ್ಚ್ 19: ಮಾರಣಾಂತಿಕ ಕೊರೊನಾ ವೈರಸ್ ಭೀತಿಯಿಂದ ಕಲಬುರಗಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಬಳಿಕ, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ.

ಕಲಬುರಗಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಜಿಲ್ಲಾಡಳಿತ ಸಕಲ ಕ್ರಮ ಕೈಗೊಂಡಿದ್ದು, ಇಂದು ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ಸುದ್ದಿಗೋಷ್ಠಿ ನಡೆಸಿದರು. ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.

ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಕಲಬುರಗಿ ವೈದ್ಯನಿಗೂ ಕೊರೊನಾ ಪಾಸಿಟಿವ್ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಕಲಬುರಗಿ ವೈದ್ಯನಿಗೂ ಕೊರೊನಾ ಪಾಸಿಟಿವ್

''ಕೊರೊನಾ ಸೊಂಕು ಹರಡದಂತೆ ಕಲಬುರಗಿ ನಗರದ ವಾರ್ಡ್ ನಂಬರ್ 30 ರ ಜೊತೆಗೆ 14 ಅನ್ನು ಸಹ ಕಂಟೇನ್ ಮೆಂಟ್ ಝೋನ್ ಎಂದು ಗುರುತಿಸಿ ಎರಡು ವಾರ್ಡ್ ಗಳಲ್ಲಿ ಸ್ಯಾನಿಟೈಝೇಷನ್ ಮಾಡಲಾಗಿದೆ. ಕೋವಿಡ್-19 ಪರೀಕ್ಷೆಗೆ ನವದೆಹಲಿಯಿಂದ ಈಗಾಗಲೇ ರಿ-ಏಜೆಂಟ್ ಬಂದಿದ್ದು, ಮಾರ್ಚ್ 21 ರಿಂದ ಪ್ರಯೋಗಾಲಯ ಆರಂಭವಾಗಲಿದೆ'' ಎಂದು ಸುದ್ದಿಗೋಷ್ಠಿಯಲ್ಲಿ ಶರತ್.ಬಿ ತಿಳಿಸಿದರು.

 ಮಹಾರಾಷ್ಟ್ರ-ಕಲಬುರಗಿ ನಡುವೆ ಬಸ್ ರದ್ದು

ಮಹಾರಾಷ್ಟ್ರ-ಕಲಬುರಗಿ ನಡುವೆ ಬಸ್ ರದ್ದು

''ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಂಡು ಬಂದಿರುವುದರಿಂದ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ಬರುವ ಎಲ್ಲಾ ಸರ್ಕಾರಿ, ಮತ್ತು ಖಾಸಗಿ ಬಸ್ಸುಗಳ ಸೇವೆ ರದ್ದುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಸುಳ್ಳು ಸುದ್ದಿ ಹರಿಸಿದರೆ ಅಂಥವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು'' - ಶರತ್.ಬಿ, ಕಲಬುರಗಿ ಜಿಲ್ಲಾಧಿಕಾರಿ

3 ಪಾಸಿಟಿವ್ ಪ್ರಕರಣ

3 ಪಾಸಿಟಿವ್ ಪ್ರಕರಣ

''ಸರ್ಕಾರಿ ವ್ಯವಸ್ಥೆಯಲ್ಲಿ 32 ವೆಂಟಿಲೇಟರ್ ಲಭ್ಯವಿದೆ. ಜಿಮ್ಸ್ ಮತ್ತು ಇ.ಎಸ್.ಐ.ಸಿ.ಯ ಐಸೋಲೇಷನ್ ವಾರ್ಡ್ ನಲ್ಲಿ ತಲಾ 2 ವೆಂಟಿಲೇಟರ್ ಗಳು ಕೊರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದೆ. ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ 22 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ 8 ನೆಗೆಟಿವ್ ಮತ್ತು 3 ಪಾಸಿಟಿವ್ ಬಂದಿದೆ. ಎರಡು ಪ್ರಕರಣದಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ ಒಂಬತ್ತು ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ'' - ಶರತ್.ಬಿ, ಕಲಬುರಗಿ ಜಿಲ್ಲಾಧಿಕಾರಿ

ಕಲಬುರಗಿಯ ವೃದ್ಧನ ಟ್ರಾವೆಲ್ ಹಿಸ್ಟರಿ ಬೆಚ್ಚಿಬೀಳಿಸುತ್ತೆಕಲಬುರಗಿಯ ವೃದ್ಧನ ಟ್ರಾವೆಲ್ ಹಿಸ್ಟರಿ ಬೆಚ್ಚಿಬೀಳಿಸುತ್ತೆ

 ಮುಂಜಾಗ್ರತಾ ಕ್ರಮ

ಮುಂಜಾಗ್ರತಾ ಕ್ರಮ

''ಕೊರೊನಾ ಪಾಸಿಟಿವ್ ಹೊಂದಿದ ವ್ಯಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿರುವ 98 ವ್ಯಕ್ತಿಗಳನ್ನು ಹಾಗೂ ಎರಡನೇ ಸಂಪರ್ಕ ಹೊಂದಿರುವ 333 ವ್ಯಕ್ತಿಗಳನ್ನು ಗುರುತಿಸಲಾಗಿದೆ. ಇದಲ್ಲದೆ ವಿದೇಶದಿಂದ ಆಗಮಿಸಿದ 250 ಜನರನ್ನು ಸಹ ಪತ್ತೆ ಹಚ್ಚಲಾಗಿ ಒಟ್ಟಾರೆ ಇದೂವರೆಗೆ 641 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. 11 ಜನರನ್ನು ಅಸೋಸಿಯೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ 4720 ಮನೆಗಳನ್ನು ಸರ್ವೆ ಮಾಡಿ ಅಲ್ಲಿ ಮುಂಜಾಗೃತ ಕ್ರಮವಾಗಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ'' ಎಂದು ಸುದ್ದಿಗೋಷ್ಠಿಯಲ್ಲಿ ಶರತ್.ಬಿ ತಿಳಿಸಿದರು.

ಸಹಾಯವಾಣಿ ಕೇಂದ್ರ

ಸಹಾಯವಾಣಿ ಕೇಂದ್ರ

ಕೋವಿಡ್-19 ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಸಹಾಯವಾಣಿ ಕೇಂದ್ರ 2 ರಿಂದ 4ಕ್ಕೆ ಹೆಚ್ಚಳ:

ಸಹಾಯವಾಣಿ ಸಂಖ್ಯೆ: 08472-278648, 278698, 278604, 278677.
ಸಹಾಯವಾಣಿಗೆ ಎರಡು ಹುಸಿ ಕರೆ ಬಂದಿದ್ದು, ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಎಫೆಕ್ಟ್: ಇನ್ನೆರೆಡು ದಿನದಲ್ಲೇ ಕಲಬುರಗಿಯಲ್ಲಿ ಲ್ಯಾಬ್ ಆರಂಭಕೊರೊನಾ ಎಫೆಕ್ಟ್: ಇನ್ನೆರೆಡು ದಿನದಲ್ಲೇ ಕಲಬುರಗಿಯಲ್ಲಿ ಲ್ಯಾಬ್ ಆರಂಭ

English summary
Section 144 imposed in Kalaburagi for next 3 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X