ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಒಂದೆರಡು ತಿಂಗಳಲ್ಲಿ ಕ್ಯಾನ್ಸರ್ ಆಸ್ಪತ್ರೆ ಆರಂಭ

By Mahesh
|
Google Oneindia Kannada News

ಕಲಬುರಗಿ, ಆಗಸ್ಟ್ 13: ಕಲಬುರಗಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳ ಅನುಕೂಲಕ್ಕಾಗಿ ಕಲಬುರಗಿಯಲ್ಲಿ ಒಂದೆರಡು ತಿಂಗಳಲ್ಲಿ ಸರ್ಕಾರ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.

ಶುಕ್ರವಾರ ಕಲಬುರಗಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ "ಜನ-ಮನ" ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಟ್ರಾಮಾ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ಆಸ್ಪತ್ರೆಗಳು ಸಹ ಕಲಬುರಗಿಯಲ್ಲಿ ಪ್ರಾರಂಭವಾಗಲಿವೆ ಎಂದರು.

ವಿದ್ಯಾಸಿರಿ ಯೋಜನೆಯ ಫಲಾನುಭವಿಗಳು ಇ-ಪುಸ್ತಕ ಸೌಲಭ್ಯ ಕಲ್ಪಿಸುವ ಬಗ್ಗೆ ಸಚಿವರ ಗಮನ ಸೆಳೆದಾಗ ಸಚಿವರು ಈ ಸೌಲಭ್ಯವನ್ನು ಹೆಚ್.ಕೆ.ಆರ್.ಡಿ.ಬಿ.ಯಿಂದ ಕಲ್ಪಿಸಲಾಗುವುದು. ಈ ಭಾಗದ ಅಭ್ಯರ್ಥಿಗಳು ಐ.ಎ.ಎಸ್. ಪರೀಕ್ಷೆಯ ತರಬೇತಿ ಪಡೆಯಲು ಅನುಕೂಲವಾಗುವಂತೆ ಒಂದು ತಿಂಗಳೊಳಗೆ ಸುಸಜ್ಜಿತ ತರಬೇತಿ ಕೇಂದ್ರ ಪ್ರಾರಂಭಿಸಲು ಸಹ ಕ್ರಮ ಕೈಗೊಳ್ಳಲಾಗುವುದು.

ವಿದ್ಯಾಸಿರಿ ಯೋಜನೆ ಬಗ್ಗೆ ಮಾಹಿತಿ

ವಿದ್ಯಾಸಿರಿ ಯೋಜನೆ ಬಗ್ಗೆ ಮಾಹಿತಿ

ವಿದ್ಯಾಸಿರಿ ಯೋಜನೆಯಡಿ ಈಗ ಪ್ರತಿ ತಿಂಗಳು ನೀಡಲಾಗುತ್ತಿರುವ 1500 ರೂ. ಹಣವನ್ನು 3000 ರೂ. ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗುವುದೆಂದರು. ಕಲಬುರಗಿ ಜಿಲ್ಲೆಯಲ್ಲಿರುವ ಎಲ್ಲ ಲೈಂಗಿಕ ಅಲ್ಪಸಂಖ್ಯಾತರಿಗೆ 500ರೂ.ಮಾಸಾಶನ ಸೌಲಭ್ಯ ಮತ್ತಿತರ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಚಿವರು ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದೆಂದರು.

ಕೃಷಿ ಭಾಗ್ಯ ಯೋಜನೆಯಲ್ಲಿ ಅಕ್ರಮದ ಬಗ್ಗೆ

ಕೃಷಿ ಭಾಗ್ಯ ಯೋಜನೆಯಲ್ಲಿ ಅಕ್ರಮದ ಬಗ್ಗೆ

ಕೃಷಿ ಭಾಗ್ಯ ಯೋಜನೆಯಡಿ ನಡೆದಿದೆ ಎನ್ನಲಾದ ಅಕ್ರಮ ಅವ್ಯವಹಾರದ ಬಗ್ಗೆ ವಿಚಾರಣೆ ನಡೆಸಲಾಗುವುದು. ಸರ್ಕಾರದ ಯೋಜನೆಗಳು ಜನರಿಗೆ ಪಾರದರ್ಶಕವಾಗಿ ತಲುಪಿಸುವ ಜವಾಬ್ದಾರಿ ಆಯಾ ಯೋಜನೆಗಳ ಅನುಷ್ಠಾನಾಧಿಕಾರಿಗಳ ಮೇಲಿದೆ. ಇಂತಹ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ತೊಗರಿ ಬೆಳೆ ವಿತರಣೆ

ಅನ್ನಭಾಗ್ಯ ಯೋಜನೆಯಡಿ ತೊಗರಿ ಬೆಳೆ ವಿತರಣೆ

ಅನ್ನಭಾಗ್ಯ ಯೋಜನೆಯಡಿ ತೊಗರಿ ಬೆಳೆ ವಿತರಿಸುವ ಹಾಗೂ ಪಡಿತರ ಕಾರ್ಡುದಾರರಿಗೆ ನೀಡಲಾಗುವ ಆಹಾರಧಾನ್ಯದ ಪ್ರಮಾಣ ಹೆಚ್ಚಿಸುವ ಬಗ್ಗೆ ಆಹಾರ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ವಿತರಿಸಲಾಗುವ ಹಾಲನ್ನು ಆರು ದಿನ ವಿತರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದರು.

ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜನಮನ

ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜನಮನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಆಯೋಜಿಸಿದ "ಜನ-ಮನ" ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧ್ಯಕ್ಷತೆ ವಹಿಸಿದ್ದರು.

ಜನಮನ ಕಾರ್ಯಕ್ರಮದಲ್ಲಿ ಗಣ್ಯರು

ಜನಮನ ಕಾರ್ಯಕ್ರಮದಲ್ಲಿ ಗಣ್ಯರು

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್ ಪಾಲ್ಗೊಂಡಿದ್ದರು.

 ಕಲಬುರಗಿ ಜಿಲ್ಲಾ ಸಾಧನೆಯ ಪುಸ್ತಕ ಬಿಡುಗಡೆ

ಕಲಬುರಗಿ ಜಿಲ್ಲಾ ಸಾಧನೆಯ ಪುಸ್ತಕ ಬಿಡುಗಡೆ

ಇದಕ್ಕೂ ಮುನ್ನ ಜಿಲ್ಲಾ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದ ಮೂರು ವರ್ಷಗಳ ಕಲಬುರಗಿ ಜಿಲ್ಲಾ ಸಾಧನೆಯ ಪುಸ್ತಕ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಉಜ್ವಲ್‍ಕುಮಾರ್ ಘೋಷ್ ಆಶಯ ಭಾಷಣ ಮಾಡಿದರು. ವಾರ್ತಾಧಿಕಾರಿ ಜಿ. ಚಂದ್ರಕಾಂತ್ ಸ್ವಾಗತಿಸಿದರು. ಶಶಿಕಲಾ ಜಡೆ ಕಾರ್ಯಕ್ರಮ ನಿರೂಪಿಸಿದರು ವಂದಿಸಿದರು.

English summary
Medical Education Minister Sharanprakash Patil sadi Kalaburagi to get peripheral cancer centre in order to reduce the pressure on the Kidwai Memorial Institute of Oncology (KMIO) in Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X